ಭಾನುವಾರ, ಜನವರಿ 24, 2021
18 °C
ಸರ್ಕಾರ – ರೈತ ಸಂಘಟನೆಗಳ ನಡುವೆ ಮೂಡದ ಒಮ್ಮತ

ಹೊಸ ವರ್ಷದ ದಿನ: ಕೊರೆವ ಚಳಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದೆಹಲಿ: ಸರ್ಕಾರದೊಂದಿಗೆ ನಡೆದ ಮಾತುಕತೆಗಳು ಯಶಸ್ವಿಯಾಗದ ಕಾರಣ ಕೊರೆಯ ಚಳಿಯನ್ನೂ ಲೆಕ್ಕಿಸದೇ ದೆಹಲಿಯ ಸಿಂಘು ಗಡಿಯಲ್ಲಿ ಸಾವಿರಾರು ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಹೊಸ ವರ್ಷದ ದಿನವಾದ ಶುಕ್ರವಾರದಂದು ಸಿಂಘು ಗಡಿ ಪ್ರದೇಶದಲ್ಲಿ 1.1 ಡಿಗ್ರಿ ಸೆಲ್ಷಿಯಸ್‌ ತಾಪಮಾನ ದಾಖಲಾಗಿದ್ದು, ಇದು ಹದಿನೈದು ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನವಾಗಿದೆ. ಇಂಥ ಕೊರೆಯುವ ಚಳಿಯಲ್ಲೂ ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: 

ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಬುಧವಾರ ನಡೆದ ಸಭೆಯಲ್ಲಿ ವಿದ್ಯುತ್ ದರ ಹೆಚ್ಚಳ ಮತ್ತು ಕೃಷಿ ತ್ಯಾಜ್ಯ ಸುಡುವುದರ ವಿರುದ್ಧ ದಂಡ ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿತ್ತು. ಆದರೆ, ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಹಾಗೂ ಕನಿಷ್ಠ ಬೆಂಬಲ ಬೆಲೆ ಕುರಿತು ಖಾತರಿ ನೀಡುವಂತಹ ವಿಚಾರದಲ್ಲಿ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಒಮ್ಮತ ಮೂಡಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು