ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ರೈತರು ಶನಿವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ರಾಜಧಾನಿ ದೆಹಲಿಯ ಗಡಿ ಪ್ರದೇಶಗಳಲ್ಲಿ ಸತತ 64 ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ರಾತ್ರಿ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ರೈತರ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

‘ರೈತರ ಚಳುವಳಿ ಶಾಂತಿಯುತವಾಗಿತ್ತು. ಮುಂದೆಯೂ ಶಾಂತಿಯುತವಾಗಿಯೇ ಇಗಿರುತ್ತದೆ’ ಎಂದು ಸಮುಕ್ತ್ ಕಿಸಾನ್ ಮೋರ್ಚಾ ಸಂಘಟನೆ ನಾಯಕ ದರ್ಶನ್ ಪಾಲ್ ಹೇಳಿದರು.

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪುಣ್ಯತಿಥಿಯಾದ ಇಂದು ಸತ್ಯ ಮತ್ತು ಅಹಿಂಸೆಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಒಂದು ದಿನದ ಮಟ್ಟಿಗೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ದರ್ಶನ್ ತಿಳಿಸಿದ್ದಾರೆ.

ಕೃಷಿ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಹನ್ನೊಂದು ಸುತ್ತಿನ ಮಾತುಕತೆಯೂ ವಿಫಲವಾಗಿದ್ದು, ಉದ್ದೇಶಿತ ಕಾನೂನುಗಳನ್ನು 18 ತಿಂಗಳುಗಳ ಕಾಲ ಅಮಾನತ್ತಿನಲ್ಲಿಡಲು ಸರ್ಕಾರ ಮುಂದಾಗಿದೆ. ಆದರೆ, ನಿರ್ಧಾರ ಬದಲಿಸದ ರೈತ ಸಂಘಟನೆಗಳು ಪ್ರತಿಭಟನೆ ಮುಂದುವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.