ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಲ್ಡೋಜರ್ ಮುಂದೆ ನಿಂತ ಮಹಿಳೆಯರು: ಶಾಹೀನ್ ಬಾಗ್‌:ತೆರವು ಕಾರ್ಯಾಚರಣೆ ಸ್ಥಗಿತ

Last Updated 9 ಮೇ 2022, 10:42 IST
ಅಕ್ಷರ ಗಾತ್ರ

ನವದೆಹಲಿ: ಜಹಾಂಗಿರ್‌ಪುರಿ ಬಳಿಕ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆಗೆ ದಕ್ಷಿಣ ದೆಹಲಿ ಪಾಲಿಕೆ(ಎಸ್‌ಡಿಎಂಸಿ) ಮುಂದಾಗಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ಬುಲ್ಡೋಜರ್ ಜೊತೆ ಬಂದಿದ್ದ ತೆರವು ಕಾರ್ಯಾಚರಣೆ ತಂಡದ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದೆ ವಾಪಸ್ ಆಗಿದ್ದಾರೆ.

ಬಿಜೆಪಿ ಆಡಳಿತವಿರುವ ದಕ್ಷಿಣ ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್(ಎಸ್‌ಡಿಎಂಸಿ) ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕಟ್ಟಡಗಳ ನೆಲಸಮ ಕಾರ್ಯಾಚರಣೆ ನಿಲ್ಲಿಸುವಂತೆ ಒತ್ತಾಯಿಸಿದ್ದರು. ಕೆಲ ಮಹಿಳೆಯರು ಬುಲ್ಡೋಜರ್ ಮುಂದೆ ನಿಂತು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ, ಎಎಪಿ ಮತ್ತು ಕಾಂಗ್ರೆಸ್ ಸದಸ್ಯರೂ ಸಹ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಶಾಹೀನ್ ಬಾಗ್, ಕಲಿಂಡಿ ಕುಂಜ್, ಸರಿತಾ ವಿಹಾರ್, ಮಥುರಾ ರಸ್ತೆ ಮುಂತಾದ ಕಡೆ ವಾಹನ ದಟ್ಟಣೆ ಉಂಟಾಗಿತ್ತು.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ಎಸ್‌ಡಿಎಂಸಿ ಕೇಂದ್ರ ವಲಯದ ಅಧಿಕಾರಿ ರಾಜ್‌ಪಾಲ್ ಸಿಂಗ್ , ಪ್ರತಿಭಟನೆಯಿಂದಾಗಿ ಅಕ್ರಮ ಕಟ್ಟಡಗಳ ತೆರವು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

2019ರ ಪೌರತ್ವ ಕಾಯ್ದೆ ವಿರೋಧಿ ಹೋರಾಟದ ಮೂಲಕ ಶಾಹೀನ್ ಬಾಗ್ ಗಮನ ಸೆಳೆದಿತ್ತು. ಕೋವಿಡ್ ಉಲ್ಬಣಗೊಂಡ ಬಳಿಕ ಮಾರ್ಚ್ 2020ರಲ್ಲಿ ಪ್ರತಿಭಟನೆ ಕೈಬಿಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT