ಮಂಗಳವಾರ, ಮಾರ್ಚ್ 21, 2023
29 °C

ಅಳಿಯ ರಿಷಿ ಸುನಕ್‌ ಬಗ್ಗೆ ಹೆಮ್ಮೆಯಾಗುತ್ತಿದೆ: ನಾರಾಯಣಮೂರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬ್ರಿಟನ್‌ ಪ್ರಧಾನಿ ಹುದ್ದೆಗೆ ಏರಿದ ರಿಷಿ ಸುನಕ್‌ ಅವರ ಬಗ್ಗೆ ಹೆಮ್ಮೆಯಾಗುತ್ತಿದೆ ಎಂದು ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಳಿಯನಿಗೆ ಉನ್ನತ ಸ್ಥಾನಕ್ಕೇರಿ ಇತಿಹಾಸ ಸಷ್ಟಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ. 

ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಗಂಡ, 42 ವರ್ಷದ ರಿಷಿ ಸುನಕ್‌ ಅವರು ಭಾನುವಾರ ಬ್ರಿಟನ್‌ನ ಆಡಳಿತರೂಢ ಕನ್ಸರ್ವೇಟಿವ್‌ ಪಕ್ಷದ ನಾಯಕತ್ವವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಆ ದೇಶದ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಬಿಳಿಯನಲ್ಲದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬ್ರಿಟನ್‌ ಜನತೆಗೆ ಉತ್ತಮವಾದುದ್ದನ್ನೇ ಮಾಡುತ್ತಾರೆ ಎಂಬ ಭರವಸೆ ನಮಗಿದೆ ಎಂದು ನಾರಾಯಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2009ರಲ್ಲಿ ಅಕ್ಷತಾರನ್ನು ರಿಷಿ ವಿವಾಹವಾದರು. ದಂಪತಿಗೆ ಕೃಷ್ಣಾ ಮತ್ತು ಅನೂಷ್ಕಾ ಎಂಬ ಹೆಸರಿನ ಇಬ್ಬರು ಪುತ್ರಿಯರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು