ನವದೆಹಲಿ: 'ನನ್ನ ಹೆಸರು ಸಾವರ್ಕರ್ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್ ಅವರ ಮೊಮ್ಮಗ ಕಿಡಿಕಾರಿದ್ದಾರೆ. ತಮ್ಮ ತಾತ ಬ್ರಿಟೀಷರ ಬಳಿ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.

ರಾಹುಲ್ ಗಾಂಧಿಯವರು ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವ ಕಳೆದುಕೊಂಡ ಬಳಿಕ ನಡೆಸಿದ್ದ ಮೊದಲ ಸುದ್ದಿಗೋಷ್ಠಿಯಲ್ಲಿ, ಸಾವರ್ಕರ್ ಹೆಸರು ಉಲ್ಲೇಖಿಸಿ ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್, 'ಕ್ಷಮೆ ಕೇಳಲು ನಾನೇನು ಸಾವರ್ಕರ್ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸಾವರ್ಕರ್ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡುವ ದಾಖಲೆಗಳನ್ನು ತೋರಿಸುವಂತೆ ಅವರಿಗೆ ಸವಾಲು ಹಾಕುತ್ತೇನೆ' ಎಂದಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳಲು ನಾನೇನು ಸಾವರ್ಕರ್ ಅಲ್ಲ: ಬಿಜೆಪಿಗೆ ರಾಹುಲ್ ಗಾಂಧಿ ತಿರುಗೇಟು

'ರಾಜಕೀಯ ಪ್ರಚಾರಕ್ಕಾಗಿ ದೇಶಪ್ರೇಮಿಗಳ ಹೆಸರುಗಳನ್ನು ಬಳಸುವುದು ತಪ್ಪು ಮತ್ತು ಶೋಚನೀಯ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.