ಗುರುವಾರ , ಆಗಸ್ಟ್ 5, 2021
29 °C

ದೆಹಲಿ: ನಾಳೆಯಿಂದ ತೆರೆಯಲಿವೆ ಬಾರ್‌, ಉದ್ಯಾನಗಳು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್ ಎರಡನೇ ಅಲೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದ್ದು, ಸೋಮವಾರದಿಂದ ಬಾರ್‌ ಮತ್ತು ಉದ್ಯಾನಗಳು ತೆರೆಯಲಿವೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಭಾನುವಾರ ಈ ಕುರಿತು ಆದೇಶ ಹೊರಡಿಸಿದ್ದು, ಮಧ್ಯಾಹ್ನ 12ರಿಂದ ರಾತ್ರಿ 10 ರವರೆಗೆ ಶೇ 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಬಾರ್‌ಗಳನ್ನು ಮತ್ತೆ ತೆರೆಯಲು ಅವಕಾಶ ನೀಡಿರುವುದಾಗಿ ತಿಳಿಸಿದೆ.

ಬಾರ್‌ಗಳಲ್ಲಿ ಕೋವಿಡ್‌ ಸುರಕ್ಷಾ ಮಾರ್ಗಸೂಚಿ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅದರ ಪಾಲನೆಯ ಸಂಪೂರ್ಣ ಜವಾಬ್ದಾರಿ ಬಾರ್‌ಗಳ ಮಾಲೀಕರದ್ದೇ ಆಗಿರುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಉದ್ಯಾನಗಳು, ಗಾಲ್ಫ್‌ ಕ್ಲಬ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಜತೆಗೆ ಹೊರಾಂಗಣ ಯೋಗ ಚಟುವಟಿಕೆಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ ಚಿತ್ರಮಂದಿರಗಳು, ಜಿಮ್‌ಗಳು, ಸ್ಪಾಗಳು ಸೇರಿದಂತೆ ನಿಷೇಧಿತ ಚಟುವಟಿಕೆಗಳು ಮತ್ತು ಸೇವೆಗಳು ಇದೇ 28 ರಂದು ಬೆಳಿಗ್ಗೆ 5 ಗಂಟೆಯವರೆಗೆ ಮುಚ್ಚಿರುತ್ತವೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು