ನವದೆಹಲಿ: ‘ಖಾಲಿಸ್ತಾನ ಪರವಾಗಿ ಲಂಡನ್‌ನಲ್ಲಿ ಭಾನುವಾರ ಹೋರಾಟ ನಡೆಸುವ ವೇಳೆ ಭಾರತೀಯ ಹೈಕಮಿಷನ್ ಎದುರು ಅಳವಡಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದ ಪ್ರತ್ಯೇಕತಾವಾದಿಗಳನ್ನು ಕೂಡಲೇ ಬಂಧಿಸುವಂತೆ ಬ್ರಿಟನ್ ಸರ್ಕಾರವನ್ನು ಭಾರತ ಒತ್ತಾಯಿಸಿದೆ’ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಸೋಮವಾರ ತಿಳಿಸಿದ್ದಾರೆ.
‘ಘಟನೆ ಸಂಬಂಧ ಭಾರತವು ಪ್ರತಿಭಟನೆ ದಾಖಲಿಸಿದೆ. ಭಾರತೀಯ ಹೈಕಮಿಷನ್‌ಗೆ ಸೂಕ್ತ ಭದ್ರತೆ ಒದಗಿಸುವಂತೆಯೂ ಆಗ್ರಹಿಸಲಾಗಿದೆ’ ಎಂದಿದ್ದಾರೆ.
ಕಾಂಗ್ರೆಸ್ ಖಂಡನೆ: ಲಂಡನ್‌ನಲ್ಲಿ ನಡೆದಿರುವ ಘಟನೆಯನ್ನು ಕಾಂಗ್ರೆಸ್ ಖಂಡಿಸಿದೆ.
‘ಬ್ರಿಟನ್ ಸರ್ಕಾರವು ತನ್ನ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದ್ದು, ಘಟನೆಯ ನೈತಿಕ ಹೊಣೆ ಹೊರಬೇಕು’ ಎಂದು ಆಗ್ರಹಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.