ಬುಧವಾರ, ಫೆಬ್ರವರಿ 1, 2023
18 °C

ಮಹಾರಾಷ್ಟ್ರ: ಒಂದೇ ಕುಟುಂಬದ ಏಳು ಸದಸ್ಯರ ಮೃತದೇಹ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಪುಣೆ: ಮಕ್ಕಳೂ ಸೇರಿ ಒಂದೇ ಕುಟುಂಬದ ಏಳು ಸದಸ್ಯರ ಮೃತದೇಹಗಳು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಭೀಮಾ ನದಿ ಪಾತ್ರದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

ವೃದ್ಧ ದಂಪತಿ, ಅವರ ಮಗಳು, ಅಳಿಯ ಮತ್ತು ಮೂವರು ಮೊಮ್ಮಕ್ಕಳ ಮೃತದೇಹ ಪತ್ತೆಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಆಧರಿಸಿ ಪೊಲೀಸರು ತಿಳಿಸಿದ್ದಾರೆ. 

ಜಿಲ್ಲೆಯ ಯಾವತ್‌ ಗ್ರಾಮದ ಬಳಿ ಭೀಮಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಪರ್ಗಾಂವ್‌ ಸೇತುವೆ ಬಳಿ ನಾಲ್ಕು ಮೃತದೇಹಗಳು ಸೋಮವಾರವೇ ಪತ್ತೆಯಾಗಿವೆ ಮತ್ತು ಮೂರು ಮೃತದೇಹಗಳು ಮಂಗಳವಾರ ಪತ್ತೆಯಾದವು. ಪ್ರತಿ ಮೃತದೇಹಗಳೂ 200ರಿಂದ 300 ಮೀಟರ್‌ ಅಂತರದಲ್ಲಿ ಪತ್ತೆಯಾಗಿವೆ. ಸಾವಿಗೆ ಕಾರಣ ಮತ್ತು ಸನ್ನಿವೇಶದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಎಲ್ಲಾ ದೃಷ್ಟಿಕೋನದಲ್ಲೂ ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆ ಸಾಧ್ಯತೆ ಕುರಿತೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು