ಮುಂಬೈ: ಐಟಿ ಉದ್ಯೋಗಿ, ಅವರ ಪತ್ನಿ ಮತ್ತು ಅವರ ಎಂಟು ವರ್ಷದ ಮಗ ಬುಧವಾರ ಪುಣೆಯ ಔಂಧ್‌ನಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸುದೀಪ್ತೋ ಗಂಗೂಲಿ (44), ಪತ್ನಿ ಪ್ರಿಯಾಂಕಾ (40) ಮತ್ತು ಮಗ ತನೀಶ್ (8) ಮೃತರು. ಮೊದಲು ಪತ್ನಿ ಮತ್ತು ಮಗನನ್ನು ಕೊಂದು ನಂತರ ಗಂಗೂಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬೆಂಗಳೂರಿನಲ್ಲಿ ನೆಲೆಸಿರುವ ಸುದೀಪ್ತೋ ಸಹೋದರ, ಅವರ ಮೊಬೈಲ್‌ಗೆ ಹಲವು ಬಾರಿ ಕರೆ ಮಾಡಿದ್ದರು. ಆದರೆ ಯಾರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡಿದ್ದ ಅವರು ತಮ್ಮ ಸ್ನೇಹಿತರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಶವಗಳು ಪತ್ತೆಯಾಗಿದ್ದವು. ಚತುರ್ಶೃಂಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬದ ಆರ್ಥಿಕ ವಿವರದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.