ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌| ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮ: ಯಾರಿಗೆ ಎಷ್ಟು?

Last Updated 24 ಜನವರಿ 2022, 10:50 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಮೈತ್ರಿಕೂಟದ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ.

117 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್‌ನಲ್ಲಿ ಬಿಜೆಪಿ, ಪಂಜಾಬ್‌ ಲೋಕ ಕಾಂಗ್ರೆಸ್‌, ಸಂಯುಕ್ತ ಶಿರೋಮಣಿ ಅಕಾಲಿ ದಳ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ 65 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್‌ನಿಂದ ಸಿಡಿದು ಹೊರಬಂದ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಅವರ ‘ಪಂಜಾಬ್‌ ಲೋಕ ಕಾಂಗ್ರೆಸ್‌’ 37 ಮತ್ತು ಎಸ್‌ಎಡಿ– ಸಂಯುಕ್ತ ಪಕ್ಷವು 15 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೋಮವಾರ ಹೇಳಿದ್ದಾರೆ.

ಪಂಜಾಬ್ ವಿಧಾನಸಭೆಗೆ ಫೆಬ್ರುವರಿ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

‘ಪಂಜಾಬ್‌ಗೆ ವಿಶೇಷ ಆದ್ಯತೆ ಸಿಗಬೇಕಿದೆ. ಭದ್ರತೆಯು ಪಂಜಾಬ್‌ನ ಗಂಭೀರ ಸಮಸ್ಯೆಯಾಗಿದೆ. ಈ ಚುನಾವಣೆಯು ಸ್ಥಿರತೆ ಮತ್ತು ಸುರಕ್ಷತೆಗಾಗಿ ನಡೆಯುತ್ತಿದೆ. ಪಂಜಾಬ್ ಅನ್ನು ಮರಳಿ ಹಳಿಗೆ ತರುವುದು ನಮ್ಮ ಧ್ಯೇಯ’ ಎಂದು ಜೆಪಿ ನಡ್ಡಾ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 1984ರ ಗಲಭೆಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದರು. ಅದರ ಪರಿಣಾಮವಾಗಿ ಇಂದು ಆರೋಪಿಗಳು ಜೈಲಿನಲ್ಲಿದ್ದಾರೆ. ಪಂಜಾಬ್‌ನಲ್ಲಿ 'ಮಾಫಿಯಾ ರಾಜ್' ನಿರ್ಮೂಲನೆ ಮಾಡುತ್ತೇವೆ ಎಂದೂ ನಡ್ಡಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT