ಪಂಜಾಬ್ ಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಗಾಗಿ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ.
ಕೆಲ ಮಾಜಿ ಶಾಸಕರೂ ಕೂಡ ಈ ಬಾರಿ ಕಣಕ್ಕಿಳಿಯಲಿದ್ದಾರೆ. ಪಂಜಾಬ್ ಮಾಜಿ ಮುಖ್ಯಮಂತ್ರಿ ಹರ್‌ಚರಣ್ ಸಿಂಗ್ ಬ್ರಾರ್ ಅವರ ಸೊಸೆ ಕರಣ್ ಬ್ರಾರ್ ಅವರು ಮುಕ್ತ್‌ಸರ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಕಳೆದ ಚುನಾವಣೆಯಲ್ಲಿ ಬಟಾಲ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಪಂಜಾಬ್ ಮಾಜಿ ಸಚಿವ ಅಶ್ವಾನಿ ಶೇಕ್ರಿ ಅವರು ಈ ಬಾರಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಮಾಜಿ ಶಾಸಕಿ ಹರ್‌ಚಂದ್ ಕೌರ್ ಅವರು ಮೀಸಲು ಕ್ಷೇತ್ರವಾದ ಮೆಹಲ್ ಕಲನ್‌ನಿಂದ ಕಣಕ್ಕಿಳಿಯಲಿದ್ದಾರೆ.
ಗುರು ಹರ್ ಸಾಹೈ ಕ್ಷೇತ್ರದ ಶಾಸಕ ಗುರ್‌ಜೀತ್ ಸಿಂಗ್ ಸೋಧಿ ಅವರು ಬಿಜೆಪಿಗೆ ಸೇರಿದ ಕಾರಣ ಆ ಕ್ಷೇತ್ರದಿಂದ ವಿಜಯ್ ಕಾರ್ಲಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಆಮ್ ಆದ್ಮಿ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಆಶು ಬಂಗಾರ್ ಅವರನ್ನು ಪಿರೋಜ್‌ಪುರ್ ಗ್ರಾಮೀಣ ಕ್ಷೇತ್ರದಿಂದ ಕಣಕ್ಕಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.