ಬುಧವಾರ, ನವೆಂಬರ್ 25, 2020
21 °C
ನಾಲ್ಕು ಮಸೂದೆಗಳಿಗೆ ಸರ್ವಾನುಮತದಿಂದ ಅನುಮೋದನೆ

ಪಂಜಾಬ್‌ ವಿಧಾನಸಭೆಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಪಂಜಾಬ್‌ ವಿಧಾನಸಭೆಯಲ್ಲಿ ಮಂಗಳವಾರ ನಾಲ್ಕು ಮಸೂದೆಗಳನ್ನು ಸರ್ವಾನುಮತದಿಂದ ಅಂಗೀಕರಿಸುವ ಜತೆಗೆ, ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಕೈಗೊಳ್ಳಲಾಯಿತು.

ವಿಧಾನಸಭೆಯಲ್ಲಿ ಐದು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಮಸೂದೆಗಳನ್ನು ಅಂಗೀಕರಿಸಲಾಯಿತು. ಈ ವೇಳೆ  ಬಿಜೆಪಿ ಶಾಸಕರು ಕಲಾಪದಲ್ಲಿ ಭಾಗವಹಿಸಿರಲಿಲ್ಲ. ಪ್ರಸ್ತುತ ವಿಧಾನಸಭೆಯಲ್ಲಿ ಇಬ್ಬರು ಬಿಜೆಪಿ ಶಾಸಕರಿದ್ದಾರೆ.

ಮಸೂದೆಗಳ ಅಂಗೀಕಾರ ಮತ್ತು ಕೃಷಿ ಮಸೂದೆಗಳ ವಿರುದ್ಧ ನಿರ್ಣಯವನ್ನು ವಿರೋಧಪಕ್ಷಗಳಾದ ಎಸ್‌ಎಡಿ, ಎಎಪಿ ಮತ್ತು ಲೋಕ್‌ಇನ್ಸಾಫ್‌ನ ಶಾಸಕರು ಬೆಂಬಲಿಸಿದರು. 

ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆಗೆ ಗೋಧಿ ಅಥವಾ ಭತ್ತವನ್ನು ಖರೀದಿ ಅಥವಾ ಮಾರಾಟ ಮಾಡಿದರೆ, ಅಂಥವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗುತ್ತದೆ ಎಂಬ ನಿರ್ಣಯವನ್ನು ಕೈಗೊಳ್ಳಲಾಯಿತು. ಎರಡೂವರೆ ಎಕರೆ ಒಳಗೆ ಜಮೀನು ಹೊಂದಿರುವ ರೈತರಿಗೆ ಈ ನಿಬಂಧನೆಯಿಂದ ವಿನಾಯಿತಿ ನೀಡಲಾಗಿದೆ. ಕಾಳಸಂತೆಯಲ್ಲಿ ಧಾನ್ಯಗಳನ್ನು ಮಾರಾಟ ಮಾಡುವುದನ್ನು ತಪ್ಪಿಸುವುದಕ್ಕಾಗಿ ಈ ಕಠಿಣ ನಿಯಮವನ್ನು ಜಾರಿಗೆ ತರಲಾಗಿದೆ.

ಮಸೂದೆಗಳ ಅಂಗೀಕಾರಕ್ಕೆ ಮುನ್ನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಸರ್ವಪಕ್ಷಗಳ ಸಭೆ ನಡೆಸಿದರು.  ಮಸೂದೆಗಳ ಅಂಗೀಕಾರ ಮತ್ತು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಕೈಗೊಳ್ಳುವ ಮುನ್ನ ಮುಖ್ಯಮಂತ್ರಿಯವರು ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು