ಗುರುವಾರ , ಅಕ್ಟೋಬರ್ 28, 2021
19 °C

ಪಂಜಾಬ್‌ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಕಣ್ಣೀರಿಟ್ಟ ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡೀಗಡ: ಸಂಪುಟ ವಿಸ್ತರಣೆ ಬೆನ್ನಲ್ಲೇ ಭಿನ್ನಮತ ಕಂಡುಬಂದಿದೆ. ತಮ್ಮನ್ನು ಕಾರಣವಿಲ್ಲದೇ ಸಂಪುಟದಿಂದ ಕೈಬಿಡಲಾಗಿದೆ ಎಂಬ ಕೂಗು ಎದ್ದಿದೆ.

ಪ್ರಮಾಣವಚನ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ ಬಲ್ಬೀರ್ ಸಿಂಗ್ ಸಿಧು ಹಾಗೂ ಗುರುಪ್ರೀತ್ ಸಿಂಗ್ ಕಾಂಗಾರ್ ಅವರು ತಮ್ಮನ್ನು ಸಂಪುಟದಿಂದ ಕೈಬಿಟ್ಟಿರುವುದನ್ನು ಪ್ರಶ್ನಿಸಿದರು. ಬಲ್ಬೀರ್ ಸಿಧು ಅವರು ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟರು. 

ಆರು ಬಾರಿ ಶಾಸಕ ರಾಕೇಶ್ ಪಾಂಡೆ ಅವರು ಅಸಮಾಧಾನ ಹೊರಹಾಕಿದ್ದಾರೆ. ಸಂಪುಟಕ್ಕೆ ರಾಣಾ ಗುರ್ಜಿತ್ ಸಿಂಗ್ ಅವರ ಸೇರ್ಪಡೆಗೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ಭ್ರಷ್ಟಾಚಾರ ಆರೋಪ ಇರುವ ಅವರ ಬದಲಾಗಿ ದಲಿತ ನಾಯಕನ ಆಯ್ಕೆ
ಯಾಗಬೇಕು ಎಂದು ಮುಖಂಡರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು