ಭಾನುವಾರ, ಅಕ್ಟೋಬರ್ 24, 2021
25 °C

ಪಂಜಾಬ್‌: ಸ್ವರ್ಣಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಚನ್ನಿ, ಸಿಧು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಪಂಜಾಬ್‌ನ ನೂತನ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿ ಅವರು ತಮ್ಮ ಇಬ್ಬರು ಸಹೋದ್ಯೋಗಿಗಳು ಮತ್ತು ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ನವಜೋತ್‌ಸಿಂಗ್‌ ಸಿಧು ಅವರೊಂದಿಗೆ ಬುಧವಾರ ಅಮೃತಸರದಲ್ಲಿರುವ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಚನ್ನಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಧಾರ್ಮಿಕ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದಾರೆ.

ಉಪಮುಖ್ಯಮಂತ್ರಿಗಳಾದ ಸುಖ್‌ಜಿಂದರ್‌ ಸಿಂಗ್ ರಂಧಾವ ಮತ್ತು ಒ.ಪಿ ಸೋನಿ ಕೂಡ ಇದ್ದರು. ಇದೇ ವೇಳೆ ದುರ್ಗಿಯಾನ ದೇವಾಲಯಕ್ಕೂ ಭೇಟಿ ನೀಡಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು