ಮಂಗಳವಾರ, ಜನವರಿ 19, 2021
17 °C

ಕೋವಿಡ್-19: ಪಂಜಾಬ್‌ನ ಎಲ್ಲ ಪಟ್ಟಣ, ನಗರಗಳಲ್ಲಿ ರಾತ್ರಿ ಕರ್ಫ್ಯೂ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಅಮೃತಸರ: ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ ಎಲ್ಲ ಪಟ್ಟಣ, ನಗರಗಳಲ್ಲಿ ಡಿಸೆಂಬರ್‌ 1ರಿಂದ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌, 'ಪಂಜಾಬ್‌ನ ಎಲ್ಲ ಪಟ್ಟಣ ಹಾಗೂ ನಗರಗಳಲ್ಲಿ ಡಿಸೆಂಬರ್‌ 1ರಿಂದ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೊಳಿಸಲಾಗುವುದು. ರಾತ್ರಿ 10ರಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಇರಲಿದ್ದು, ಶಿಸ್ತು ಉಲ್ಲಂಘಿಸಿದವರಿಗೆ ಒಂದು ಸಾವಿರ ರೂ.ಗಳ ವರೆಗೂ ದಂಡ ವಿಧಿಸಿಲಾಗುವುದು' ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್‌ ಮತ್ತು ರಾಜಸ್ಥಾನಗಳ ಹಲವು ನಗರಗಳಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು