ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವರ್ಣ ಮಂದಿರ ಅಪವಿತ್ರ ಯತ್ನ: ಇದು ದುಷ್ಟರ ಕೆಲಸ ಎಂದ ಪಂಜಾಬ್ ಸಿಎಂ ಚನ್ನಿ

Last Updated 19 ಡಿಸೆಂಬರ್ 2021, 13:22 IST
ಅಕ್ಷರ ಗಾತ್ರ

ಅಮೃತಸರ: ವ್ಯಕ್ತಿಯೊಬ್ಬನನ್ನು ಸಾಯುವವರೆಗೂ ಹೊಡೆದಿರುವ ಘಟನೆ ನಡೆದಿರುವ ಬೆನ್ನಲ್ಲೇ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಭಾನುವಾರ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದರು.

ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ಶನಿವಾರ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲ್ಲಲಾಗಿದೆ. ಈ ಸಂಬಂಧ ತನಿಖೆಗೆ ಪಂಜಾಬ್‌ ಸರ್ಕಾರವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.

'ಎಲ್ಲ ಧರ್ಮಗಳ ಧಾರ್ಮಿಕ ಕೇಂದ್ರಗಳನ್ನು ಗೌರವಿಸಬೇಕು ಮತ್ತು ರಕ್ಷಿಸಬೇಕು, ಕೋಮು ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ. ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಕೆಲವು ದುಷ್ಟರು ಇಂಥ ಕೆಲಸಗಳನ್ನು ಮಾಡುತ್ತಿರಬಹುದು. ಪೊಲೀಸರು ತನಿಖೆ ಕೈಗೊಂಡಿದ್ದಾರೆ... ' ಎಂದು ಮುಖ್ಯಮಂತ್ರಿ ಚನ್ನಿ ಹೇಳಿದರು.

ಸಿಖ್‌ ಧಾರ್ಮಿಕ ಧ್ವಜಕ್ಕೆ ಅಗೌರವ ತೋರಿದ ವ್ಯಕ್ತಿಯೊಬ್ಬನನ್ನು ಕೊಂದಿರುವ ಘಟನೆ ಭಾನುವಾರ ನಡೆದಿದೆ. ಕಪುರ್ತಲಾದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಹಿರಿಯ ಪೊಲೀಸ್‌ ಅಧಿಕಾರಿಗಳು ಮತ್ತು ಆಡಳಿತ ಅಧಿಕಾರಿಗಳನ್ನು ಮುಖ್ಯಮಂತ್ರಿ ಚನ್ನಿ ಅವರು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈಗಾಗಲೇ ಉಪ ಮುಖ್ಯಮಂತ್ರಿ ಸುಖ್‌ಜಿಂದರ್ ಸಿಂಗ್ ರಾಂಧಾವ ಅವರು ಅಮೃತಸರದಲ್ಲಿ ಜಿಲ್ಲಾಧಿಕಾರಿ, ಪೊಲೀಸ್‌ ಕಮಿಷನರ್‌ ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT