ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಂಜಾಬ್‌ ನಿಯೋಜಿತ ಸಿಎಂ ಭಗವಂತ ಮಾನ್‌

Last Updated 14 ಮಾರ್ಚ್ 2022, 11:12 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನ ನಿಯೋಜಿತ ಮುಖ್ಯಮಂತ್ರಿ ಭಗವಂತ ಮಾನ್‌ ಅವರು ಲೋಕಸಭಾ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದರು.

ಲೋಕಸಭಾ ಸಭಾಪತಿ ಓಂ ಬಿರ್ಲಾ ಅವರಿಗೆ ಭಗವಂತ ಮಾನ್‌ ರಾಜೀನಾಮೆ ಸಲ್ಲಿಸಿದರು. ಮಾನ್ ಅವರು ಸಂಗ್ರೂರ್‌ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಅವರು ಧುರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಸ್ವಗ್ರಾಮವಾದ ಖಟಕಡಕಲಾನ್‌ನಲ್ಲಿ ಮಾರ್ಚ್ 16 ರಂದು ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯದ 3 ಕೋಟಿ ಜನರನ್ನು ಮಾನ್‌ ಆಹ್ವಾನಿಸಿದ್ದಾರೆ. ವಿಡಿಯೊವೊಂದನ್ನು ಹಂಚಿಕೊಂಡಿರುವ ಅವರು, 'ನಾನಷ್ಟೇ ಅಲ್ಲ, ನನ್ನೊಂದಿಗೆ ರಾಜ್ಯದ 3 ಕೋಟಿ ಜನರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ' ಎಂದಿದ್ದಾರೆ.

'ನಿಮ್ಮ ಸೋದರನನ್ನು ಹರಸಲು, ಪ್ರೋತ್ಸಾಹಿಸಲು ಬನ್ನಿ....16ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲರೂ ಖಟಕಡಕಲಾನ್‌ಗೆ ಬನ್ನಿ..' ಎಂದು ಪಂಜಾಬ್‌ ಜನರಿಗೆ ಮಾನ್‌ ಆಹ್ವಾನ ನೀಡಿದ್ದಾರೆ.

ಭಗವಂತ ಮಾನ್ ಅವರು ಅಮೃತಸರದಲ್ಲಿ ಭಾನುವಾರ ರೋಡ್‌ ಶೋ ನಡೆಸಿ, ಪಕ್ಷದ ಗೆಲುವನ್ನು ಸಂಭ್ರಮಿಸಿದರು. 117 ಸದಸ್ಯಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಎಪಿ 92 ಕಡೆಗಳಲ್ಲಿ ಗೆಲುವು ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT