ಚಂಡೀಗಡ: ಅಫ್ಗಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರು ಸೇರಿದಂತೆ ಎಲ್ಲಾ ಭಾರತೀಯರನ್ನು ಅಲ್ಲಿಂದ ಸ್ಥಳಾಂತರಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸೋಮವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಫ್ಗಾನಿಸ್ತಾನದ ಕಾಬೂಲ್‌ನಲ್ಲಿ ತಾಲಿಬಾನ್ ಹಿಡಿತ ಸಾಧಿಸುತ್ತಿದ್ದಂತೆ ಅಧ್ಯಕ್ಷ ಅಶ್ರಫ್ ಘನಿ ಅವರು ದೇಶ ಬಿಟ್ಟು ಪರಾರಿಯಾಗಿದ್ದಾರೆ. ಅಲ್ಲಿನ ನಾಗರಿಕರು ಭಯಭೀತರಾಗಿದ್ದಾರೆ.
ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಅಮರಿಂದರ್ ಸಿಂಗ್ ಅವರು, ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರು ಸೇರಿದಂತೆ ಎಲ್ಲಾ ಭಾರತೀಯರನ್ನು ಅಲ್ಲಿಂದ ಸ್ಥಳಾಂತರಿಸಬೇಕು ಎಂದು ನಾನು ಭಾರತ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಲ್ಲಿ ಮನವಿ ಮಾಡುತ್ತಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ನೆರವನ್ನು ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ’ ಎಂದು ಹೇಳಿದ್ದಾರೆ.
‘ಅಫ್ಗಾನಿಸ್ತಾನವು ತಾಲಿಬಾನ್ ವಶದಲ್ಲಿದೆ. ಇದು ಭಾರತಕ್ಕೆ ಉತ್ತಮ ವಿಷಯವಲ್ಲ. ಹಾಗಾಗಿ ಭಾರತದ ಎಲ್ಲಾ ಗಡಿಗಳಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಬೇಕು’ ಎಂದು ಅವರು ಭಾನುವಾರ ಟ್ವೀಟ್ ಮಾಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.