ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್ ಜನತೆಯ ಆದೇಶಕ್ಕೆ ತಲೆ ಬಾಗಿದ ಸಿಧು, ಎಎಪಿಗೆ ಅಭಿನಂದನೆ!

Last Updated 10 ಮಾರ್ಚ್ 2022, 8:55 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಎದುರಾಗಿರುವ ಹೀನಾಯ ಸೋಲನ್ನು ಒಪ್ಪಿಕೊಂಡಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು, ಆಮ್ ಆದ್ಮಿ ಪಕ್ಷವನ್ನು (ಎಎಪಿ) ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟಿಸಿರುವ ಸಿಧು, 'ಜನರ ಧ್ವನಿ, ದೇವರ ಧ್ವನಿಯಾಗಿದೆ. ಪಂಜಾಬ್ ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಆಮ್ ಆದ್ಮಿ ಪಕ್ಷಕ್ಕೆ ಅಭಿನಂದನೆಗಳು' ಎಂದು ಹೇಳಿದ್ದಾರೆ.

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷವು 91 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಅಧಿಕಾರಕ್ಕೇರುವುದು ಬಹುತೇಕ ಖಚಿತವೆನಿಸಿದೆ.

ಇನ್ನೊಂದೆಡೆ ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಮತ ಎಣಿಕೆ ಪ್ರಗತಿಯಲ್ಲಿದ್ದು, ನವಜೋತ್ ಸಿಂಗ್ ಸಿಧು, ಕೂಡ ಹಿನ್ನಡೆ ಅನುಭವಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT