ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆಗೆ ಮಣಿದ ಪಂಜಾಬ್ ಸರ್ಕಾರ: ರೈತರ ಪ್ರತಿಭಟನೆ ಅಂತ್ಯ

Last Updated 18 ಮೇ 2022, 14:07 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬ್‌ನ ಎಎಪಿ ಸರ್ಕಾರವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಕಾರಣ ರೈತರು ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ.

ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿ ಭಗವಂತ ಮಾನ್‌ ನಡುವೆ ಬುಧವಾರ ನಡೆದ ಮಾತುಕತೆ ಬಳಿಕ ರೈತರು ಪ್ರತಿಭಟನೆ ನಿಲ್ಲಿಸಿದ್ದಾರೆ.

ರೈತರ ಬೇಡಿಕೆಯನ್ನು ಮನ್ನಿಸಿ ಜೂನ್ 14ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಜೂನ್ 10ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಬೇಕೆಂದು ರೈತರು ಪಟ್ಟುಹಿಡಿದಿದ್ದರು.

ಬಳಿಕ ‘ಭಾರ್ತಿ ಕಿಸಾನ್ ಯೂನಿಯನ್ (ಸಿಧ್‌ಪುರ್)’ ಅಧ್ಯಕ್ಷ ಜಗ್‌ಜಿತ್ ಸಿಂಗ್ ದಲ್ಲೆವಾಲ್ ಪ್ರತಿಭಟನೆ ಹಿಂಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.

ಗೋಧಿ ಬೆಳೆಗೆ ಬೋನಸ್, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಂಡೀಗಡ–ಮೊಹಾಲಿ ಗಡಿ ಬಳಿ ರೈತರು ಪ್ರತಿಭಟನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT