ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರಿಂದರ್‌ ಅವರಿಂದ ಪಕ್ಷಕ್ಕೆ ತೊಂದರೆಯಾಗದೆಂಬ ಭರವಸೆ ಇದೆ: ಗೆಹ್ಲೋಟ್

Last Updated 19 ಸೆಪ್ಟೆಂಬರ್ 2021, 9:42 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಹಾನಿಯಾಗುವಂತಹ ಯಾವುದೇ ನಿರ್ಧಾರ ತೆಗೆದುಕೊಳ್ಳದಿರಲಿ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಟ್ವೀಟಿಸಿದ್ದಾರೆ.

ಟ್ವೀಟ್‌ ಮಾಡಿರುವ ಗೆಹ್ಲೋಟ್‌ ಅವರು, ಸೇನೆಯ ಮಾಜಿ ಕ್ಯಾಪ್ಟನ್‌, ಪಕ್ಷದ ಗೌರವಾನ್ವಿತ ಮುಖಂಡರು, ಮುಂದೆಯೂ ಕಾಂಗ್ರೆಸ್‌ ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಮುಂದುವರಿಯುವ ಭರವಸೆ ಇದೆ ಎಂದಿದ್ದಾರೆ.

'ಕ್ಯಾಪ್ಟನ್‌ ಸಾಹೇಬರೇ ಸ್ವತಃ ಹೇಳಿರುವಂತೆ, ಅವರಿಗೆ ಪಕ್ಷವು ಒಂಬತ್ತೂವರೆ ವರ್ಷಗಳು ಪ್ರಮುಖ ಹೊಣೆಗಾರಿಕೆಯನ್ನು ನೀಡಿದೆ ಹಾಗೂ ಪಂಜಾಬ್‌ನ ಜನತೆಗೆ ಸೇವೆ ಸಲ್ಲಿಸುವ ಕರ್ತವ್ಯವನ್ನು ಅವರು ಅತ್ಯಂತ ಪ್ರಾಮಾಣಿಕವಾಗಿ ಪೂರೈಸಿದ್ದಾರೆ' ಎಂದು ಪ್ರಕಟಿಸಿದ್ದಾರೆ.

ಪಂಜಾಬ್‌ ಕಾಂಗ್ರೆಸ್‌ನ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯ ಆಯ್ಕೆ ಈಗ ಸೋನಿಯಾ ಗಾಂಧಿ ಅವರ ಅಂಗಳದಲ್ಲಿದೆ. ಇಂದು ಪಂಜಾಬ್ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯನ್ನು ನಿಗದಿಪಡಿಸಲಾಗಿದ್ದು, ಅಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಯ ಸಂಬಂಧ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.

ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಸಭಾ ಸದಸ್ಯೆ ಅಂಬಿಕಾ ಸೋನಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯ ಕುರಿತು ಕೇಳಿಬಂದಿತ್ತಾದರೂ, ಅಂಬಿಕಾ ಮುಖ್ಯಮಂತ್ರಿ ಹೊಣೆಯನ್ನು ನಿರಾಕರಿಸುವುದಾಗಿ ವರದಿಯಾಗಿದೆ.

ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಸುನೀಲ್ ಜಾಖಡ್, ಪಂಜಾಬ್‌ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ತೃಪ್ತ್‌ ರಾಜಿಂದರ್ ಸಿಂಗ್ ಬಾಜ್ವಾ ಮತ್ತು ಸುಖಜಿಂದರ್ ಸಿಂಗ್ ರಾಂಧವ, ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬಂದಿರುವ ಪ್ರಮುಖ ಹೆಸರುಗಳು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT