ಬುಧವಾರ, ಜೂನ್ 29, 2022
25 °C

424 ಗಣ್ಯರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡೀಗಡ: ಪಂಜಾಬ್‌ ರಾಜ್ಯದಲ್ಲಿ 424 ಗಣ್ಯರಿಗೆ ನೀಡಿದ್ದ ಪೊಲೀಸ್‌ ಭದ್ರತೆಯನ್ನು ಎಎಪಿ ಸರ್ಕಾರ ಶನಿವಾರ ಹಿಂತೆಗೆದುಕೊಂಡಿದೆ. 

ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ಸರ್ಕಾರ ಅಧಿಕೃತವಾಗಿ ಆದೇಶ ಮಾಡಿದೆ. ಸರ್ಕಾರದ ಈ ನಡೆ ಪಂಜಾಬ್‌ ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಎಎಪಿ ಪಕ್ಷದ ವಕ್ತಾರರೊಬ್ಬರು ಹೇಳಿದ್ದಾರೆ.

ಭದ್ರತೆಯನ್ನು ಹಿಂತೆಗೆದುಕೊಂಡವರಲ್ಲಿ ಅನೇಕ ನಿವೃತ್ತ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರು ಮತ್ತು ರಾಜಕೀಯ ನಾಯಕರು ಸೇರಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. 

ಕಳೆದ ಏಪ್ರಿಲ್‌ ತಿಂಗಳಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಇತರ ನಾಯಕರು ಸೇರಿದಂತೆ 184 ಜನರ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗಿತ್ತು.

ಮಾಜಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ, ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌,  ರಣೀಂದರ್‌ ಸಿಂಗ್‌, ಕಾಂಗ್ರೆಸ್‌ ಪ್ರತಾಪ್‌ ಸಿಂಗ್‌ ಸೇರಿದಂತೆ ಹಲವರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಇದೀಗ ಮತ್ತೆ 424 ಜನರಿಗೆ ಒದಗಿಸಿದ್ದ ಭದ್ರತೆಯನ್ನು ಸರ್ಕಾರ ವಾಪಸ್‌ ಪಡೆದಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು