ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿ ಶಸ್ತ್ರಾಸ್ತ್ರ ಪ್ರದರ್ಶನ, ಹಿಂಸೆ ಪ್ರಚೋದಿಸುವ ಹಾಡು ನಿಷಿದ್ಧ

Last Updated 13 ನವೆಂಬರ್ 2022, 13:38 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬ್‌ನ ಕಾನೂನು ಸುವ್ಯವಸ್ಥೆ ಬಗ್ಗೆ ವಿರೋಧ ಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನ ಮತ್ತು ಬಂದೂಕು, ಹಿಂಸೆಯನ್ನು ಉತ್ತೇಜಿಸುವ ಹಾಡುಗಳನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ.

‘ಮುಂದಿನ ಮೂರು ತಿಂಗಳ ಒಳಗಾಗಿ ಶಸ್ತ್ರಾಸ್ತ್ರ ಪರವಾನಗಿಯನ್ನು ಪರಿಶೀಲಿಸಲಾಗುತ್ತದೆ. ತಪ್ಪಾದ ವ್ಯಕ್ತಿಗಳಿಗೆ ಪರವಾನಗಿ ನೀಡಿರುವುದು ಪತ್ತೆಯಾದಲ್ಲಿ ಕೂಡಲೇ ಪರವಾನಗಿ ರದ್ದುಪಡಿಸಲಾಗುತ್ತದೆ’ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿದೆ.

ಸಾರ್ವಜನಿಕ ಸ್ಥಳ, ಧಾರ್ಮಿಕ ಸ್ಥಳ, ವಿವಾಹ ಸಮಾರಂಭ ಮತ್ತಿತರ ಕಾರ್ಯಕ್ರಮಗಳಲ್ಲಿ ಶಸ್ತ್ರಾಸ್ತ್ರ ಕೊಂಡೊಯ್ಯಲು ಮತ್ತು ಪ್ರದರ್ಶಿಸಲು ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.ಹಾಗೆಯೇ, ಯಾವುದೇ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡುವವರ ವಿರುದ್ಧ ಎಫ್ಐಆರ್‌ ದಾಖಲಿಸುವಂತೆ ಸೂಚಿಸಲಾಗಿದೆ.

ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ವಿವಿಧ ಪ್ರದೇಶಗಳಲ್ಲಿ ಅನಿರೀಕ್ಷಿತ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ ಎಂದೂ ತಿಳಿಸಿದೆ.

ರಾಜ್ಯದಲ್ಲಿ ಇತ್ತೀಚೆಗೆ ಶಿವಸೇನಾ ನಾಯಕ ಸುಧೀರ್‌ ಸೂರಿ ಮತ್ತು ಡೇರಾ ಸಚ್ಚಾ ಸೌದಾ ಅನುಯಾಯಿ ಪರ್ದೀಪ್‌ ಸಿಂಗ್‌ ಅವರನ್ನು ಹತ್ಯೆ ಮಾಡಲಾಗಿದೆ. ಈ ಬೆಳವಣಿಗೆ ನಂತರ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT