ಬುಧವಾರ, ಮಾರ್ಚ್ 29, 2023
27 °C

ಪಂಜಾಬ್: ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡೀಗಡ: ಪಂಜಾಬ್‌ನಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಭಾನುವಾರ ಕಡಿಮೆ ಮಾಡಿದೆ.  ಪೆಟ್ರೋಲ್‌ ಲೀಟರ್‌ಗೆ ₹10 ಮತ್ತು ಡೀಸೆಲ್‌ ದರ ಲೀಟರ್‌ಗೆ ₹5 ಇಳಿಸಿದ್ದು ಹೊಸ ದರವು ಮಧ್ಯರಾತ್ರಿಯಿಂದ ಅನ್ವಯವಾಗಲಿದೆ. 

ಸಂಪುಟ ಸಭೆ ನಂತರ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಈ ಮಾಹಿತಿ ನೀಡಿದರು. ಪ್ರಸ್ತುತ ಪಂಜಾಬ್‌ನಲ್ಲಿ ಪೆಟ್ರೋಲ್‌ ಲೀಟರ್‌ಗೆ ₹106.20 ಮತ್ತು ಡೀಸೆಲ್‌ ಲೀಟರ್‌ಗೆ ₹89.83 ಇದೆ.

ಇಂಧನ ಮೇಲಿನ ತೆರಿಗೆಯನ್ನು ಕಡಿತಗೊಳಿಸುವಂತೆ ಶಿರೋಮಣಿ ಅಕಾಲಿ ದಳ, ಬಿಜೆಪಿ ಮತ್ತು ಆಮ್‌ ಆದ್ಮಿ ಪಕ್ಷ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು