ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಪಂಜಾಬ್‌ ಸರ್ಕಾರ ನಿರ್ಧಾರ

Last Updated 21 ಅಕ್ಟೋಬರ್ 2022, 13:47 IST
ಅಕ್ಷರ ಗಾತ್ರ

ಚಂಡೀಗಡ: ರಾಜ್ಯದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡಲು ಪಂಜಾಬ್‌ ಸರ್ಕಾರ ಶುಕ್ರವಾರ ನಿರ್ಧರಿಸಿದೆ. ಮುಖ್ಯಮಂತ್ರಿ ಭಗವಂತ ಮಾನ್‌ ಅವರು ಇದನ್ನು ದೀಪಾವಳಿ ಉಡುಗೊರೆ ಎಂದು ಬಣ್ಣಿಸಿದ್ದಾರೆ.

‘ಸಂಪುಟ ಸಭೆ ಬಳಿಕ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ, ಇದರಿಂದ ಲಕ್ಷಾಂತರ ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಜೊತೆಗೆ ಉದ್ಯೋಗಿಗಳಿಗೆ ಶೇಕಡಾ 6ರಷ್ಟು ತುಟ್ಟಿಭತ್ಯೆ ಸಹ ನೀಡಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ ಮತ್ತು ಗುಜರಾತ್‌ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಆಮ್‌ ಆದ್ಮಿ ಪಕ್ಷದ ಸರ್ಕಾರ ಹಳೆಯ ಪಿಂಚಣಿ ಮರು ಜಾರಿ ನಿರ್ಧಾರ ತೆಗೆದುಕೊಂಡಿದೆ.

ಕೇಜ್ರಿವಾಲ್‌ ಭರವಸೆ: ಗುಜರಾತ್‌ ಮತ್ತು ಹಿಮಾಚಲ ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ ಇಲ್ಲಿಯೂ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರುಜಾರಿ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT