ಸೋಮವಾರ, ಜನವರಿ 24, 2022
20 °C

ಪಂಜಾಬ್: ಪಠಾಣ್‌ಕೋಟ್ ಸೇನಾ ನೆಲೆ ಬಳಿ ಗ್ರೆನೇಡ್ ಸ್ಫೋಟ

ಪಿಟಿಐ Updated:

ಅಕ್ಷರ ಗಾತ್ರ : | |

ಪಠಾಣ್‌ಕೋಟ್: ಪಂಜಾಬ್‌ನ ಪಠಾಣ್‌ಕೋಟ್ ಸೇನಾ ನೆಲೆಯ ಗೇಟಿನ ಹೊರಭಾಗದಲ್ಲಿ ಗ್ರೆನೇಡ್ ಸ್ಫೋಟ ಸಂಭವಿಸಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸೇನಾ ನೆಲೆಯ ತ್ರಿವೇಣಿ ಗೇಟ್ ಹೊರಭಾಗದಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್, ಸಾವು–ನೋವು ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಸೇನಾ ನೆಲೆಯ ಗೇಟ್‌ನತ್ತ ಗ್ರೆನೇಡ್ ಎಸೆದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು