ಚಂಡೀಗಢ: ಎಎಪಿ ಶಾಸಕ ಹರ್ಜೋತ್ ಸಿಂಗ್ ಬೈನ್ಸ್ ಅವರು ಐಪಿಎಸ್ ಅಧಿಕಾರಿ ಜ್ಯೋತಿ ಯಾದವ್ ಅವರೊಂದಿಗೆ ಶನಿವಾರ ರೂಪನಗರ ಜಿಲ್ಲೆಯ ಗುರುದ್ವಾರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ವಿವಾಹವು ಸಿಖ್ ಸಮುದಾಯದ ಶಾಸ್ತ್ರದಂತೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಜೋಡಿ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿತ್ತು.
ಹರ್ಜೋತ್ ಅವರು ರೂಪನಗರ ಜಿಲ್ಲೆಯ ಆನಂದಪುರ ಸಾಹಿಬ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಇದೀಗ ಭಗವಂತ ಮಾನ್ ಅವರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.