ಮಂಗಳವಾರ, ಜನವರಿ 18, 2022
27 °C
ಪಂಜಾಬ್‌

ಪಂಜಾಬ್‌: ಇಟಲಿಯಿಂದ ಅಮೃತಸರಕ್ಕೆ ಬಂದಿಳಿದ 125 ಪ್ರಯಾಣಿಕರಿಗೆ ಕೋವಿಡ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani

ಅಮೃತಸರ: ಏರ್‌ ಇಂಡಿಯಾ ವಿಮಾನದಲ್ಲಿ ಪಂಜಾಬ್‌ನ ಅಮೃತಸರಕ್ಕೆ ಬಂದಿಳಿದ ಪ್ರಯಾಣಿಕರ ಪೈಕಿ 125 ಪ್ರಯಾಣಿಕರಿಗೆ ಕೋವಿಡ್‌–19 ದೃಢಪಟ್ಟಿದೆ. ಈ ಕುರಿತು ವಿಮಾನ ನಿಲ್ದಾಣದ ನಿರ್ದೇಶಕ ವಿ.ಕೆ.ಸೇಠ್‌ ಮಾಹಿತಿ ನೀಡಿದ್ದಾರೆ.

ಇಟಲಿಯಿಂದ ಅಮೃತಸರಕ್ಕೆ ಬಂದ ಏರ್ ಇಂಡಿಯಾ ವಿಮಾನದಲ್ಲಿ ಒಟ್ಟು 179 ಪ್ರಯಾಣಿಕರಿದ್ದರು. ಅವರಲ್ಲಿ 125 ಪ್ರಯಾಣಿಕರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ಪತ್ತೆಯಾಗಿದೆ.

 

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್‌ ಪ್ರಕರಣಗಳು ತೀವ್ರ ಏರಿಕೆ ಕಂಡಿವೆ. ಬುಧವಾರ 58 ಸಾವಿರದಷ್ಟು ಪ್ರಕರಣಗಳು ವರದಿಯಾಗಿದ್ದರೆ, ಇಂದು 90,928 ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 325 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ ಪಾಸಿಟಿವಿಟಿ ದರ ಶೇ 6.43ಕ್ಕೆ ತಲುಪಿದೆ ಹಾಗೂ ದೇಶದಲ್ಲಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 2630ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,85,401 ಸಕ್ರಿಯ ಪ್ರಕರಣಗಳಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು