ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟಿಯಾಲ ಘರ್ಷಣೆ: ಮೊಬೈಲ್ ಇಂಟರ್ನೆಟ್‌ ಸೇವೆಗಳ ಮರುಸ್ಥಾಪನೆ

Last Updated 30 ಏಪ್ರಿಲ್ 2022, 13:34 IST
ಅಕ್ಷರ ಗಾತ್ರ

ಪಟಿಯಾಲ: ಪಂಜಾಬ್‌ನ ಪಟಿಯಾಲದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಮೊಬೈಲ್ ಇಂಟರ್ನೆಟ್‌ ಸೇವೆಗಳನ್ನು ಮರುಸ್ಥಾಪಿಸಲಾಗಿದೆ.

ಶಿವಸೇನಾ ಹಾಗೂ ಖಲಿಸ್ತಾನ ಪರ ಗುಂಪಿನ ನಡುವೆ ಪಟಿಯಾಲದಲ್ಲಿ ಶುಕ್ರವಾರಘರ್ಷಣೆ ನಡೆದಿತ್ತು. ಘಟನೆಯಲ್ಲಿ ಕಲ್ಲುತೂರಾಟ ನಡೆದು ಹಲವರು ಗಾಯಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 9.30ರಿಂದ ಸಂಜೆ 6 ಗಂಟೆ ವರೆಗೆ ಮೊಬೈಲ್‌ ಇಂಟರ್ನೆಟ್‌ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಈ ಅವಧಿಯಲ್ಲಿ ಮೊಬೈಲ್‌ ಕರೆ ಹೊರತುಪಡಿಸಿದರೆ, ಇನ್ನಿತರೆ ಯಾವುದೇ ಸಂಪರ್ಕ ಸೇವೆಗಳೂ ಲಭ್ಯವಿರಲಿಲ್ಲ.

ಘಟನೆಗೆ ಸಂಬಂಧಿಸಿದಂತೆ ಪಟಿಯಾಲ ವಲಯ ಐಜಿಪಿ ಸೇರಿದಂತೆ ಮೂವರು ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಎಂಭಗವಂತ ಮಾನ್‌ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT