ಸೋಮವಾರ, ಜುಲೈ 4, 2022
23 °C

ಪ್ರಯೋಗಗಳನ್ನು ನಡೆಸಲು ಇದು ಸ್ಥಳವಲ್ಲ: ಪಟಿಯಾಲ ಘರ್ಷಣೆ ಕುರಿತು ರಾಹುಲ್‌ ಬೇಸರ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಪಂಜಾಬ್‌ನ ಪಟಿಯಾಲದಲ್ಲಿ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಅವರು, ‘ಪಟಿಯಾಲದ ದೃಶ್ಯಗಳು ಮನಕಲಕುವಂತಿವೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ... ಪಂಜಾಬ್‌ನಂತಹ ಸೂಕ್ಷ್ಮ ಗಡಿ ರಾಜ್ಯದಲ್ಲಿ ಶಾಂತಿ ಮತ್ತು ಸಾಮರಸ್ಯವು ಅತ್ಯಂತ ಅವಶ್ಯಕವಾಗಿದೆ. ಪ್ರಯೋಗಗಳನ್ನು ನಡೆಸಲು ಇದು ಸ್ಥಳವಲ್ಲ’ ಎಂದು ಹೇಳಿದ್ದಾರೆ.

‘ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪಂಜಾಬ್ ಸರ್ಕಾರಕ್ಕೆ ಮನವಿ ಮಾಡುತ್ತೇನೆ’ ಎಂದೂ ರಾಹುಲ್‌ ಟ್ವೀಟಿಸಿದ್ದಾರೆ. 

ಪಂಜಾಬ್‌ನ ಪಟಿಯಾಲದಲ್ಲಿ ಎರಡು ಗುಂಪುಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದೆ. ಶಿವಸೇನಾ ನಡೆಸುತ್ತಿದ್ದ ಮೆರವಣಿಗೆ ಮೇಲೆ ಗುಂಪೊಂದು ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು