ಭಾನುವಾರ, ನವೆಂಬರ್ 27, 2022
26 °C

ಪಂಜಾಬ್‌: ನಟ ದೀಪ್ ಸಿಧು ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನಟ ದೀಪ್ ಸಿಧು

ನವದೆಹಲಿ: ಕೋವಿಡ್‌–19 ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಕಾರಣಗಳಿಗಾಗಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಅವರ ವಿರುದ್ಧ ಫರಿದ್‌ಕೋಟ್‌ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ 188 ಮತ್ತು 269ರ ಅಡಿಯಲ್ಲಿ ಪಂಜಾಬ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ದೀಪ್‌ ಸಿಧು ಮಾಸ್ಕ್‌ ಧರಿಸದೆಯೇ ಜೈತೊ ಮತ್ತು ಮಟ್ಟಾ ಗ್ರಾಮಗಳಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಗಣರಾಜ್ಯೋತ್ಸವದ ದಿನ ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭ ದೆಹಲಿಯ ಕೆಂಪು ಕೋಟೆ ಸಂಕೀರ್ಣದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ದೀಪ್‌ ಸಿಧು ಅವರನ್ನು ದೆಹಲಿ ಪೊಲೀಸರು ಫೆಬ್ರುವರಿ ಮತ್ತು ಏಪ್ರಿಲ್‌ನಲ್ಲಿ ಬಂಧಿಸಿದ್ದರು.

ಇದನ್ನೂ ಓದಿ– ಮಕ್ಕಳ ಮೇಲೆ ಕೋವಿಡ್ 3ನೇ ಅಲೆಯ ಪರಿಣಾಮದ ಬಗ್ಗೆ ಪುರಾವೆಗಳಿಲ್ಲ: ಏಮ್ಸ್ ನಿರ್ದೇಶಕ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು