ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಧು ಕುರಿತ ಅಮರಿಂದರ್ ಸಿಂಗ್ ಹೇಳಿಕೆಗೆ ಹೈಕಮಾಂಡ್‌ ಮೌನವೇಕೆ?: ಜಾವಡೇಕರ್‌

Last Updated 19 ಸೆಪ್ಟೆಂಬರ್ 2021, 12:03 IST
ಅಕ್ಷರ ಗಾತ್ರ

ನವದೆಹಲಿ: ನವಜೋತ್‌ ಸಿಂಗ್‌ ಸಿಧು ಅವರು ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ ಈ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ಮೌನವಹಿಸಿರುವುದು ಏಕೆ ಎಂದು ಬಿಜೆಪಿ ನಾಯಕ ಪ್ರಕಾಶ್ ಜಾವಡೇಕರ್‌ ಪ್ರಶ್ನಿಸಿದ್ದಾರೆ.

‘ಅಮರಿಂದರ್ ಸಿಂಗ್ ಅವರು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಅವರನ್ನು ದೇಶ ವಿರೋಧಿ ಎಂದು ಕರೆದಿದ್ದಾರೆ. ಇದು ಅತ್ಯಂತ ಗಂಭೀರ ಆರೋಪವಾಗಿದೆ. ಇದರ ಬಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರು ಏಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ ಕೇಳುತ್ತಿದೆ’ ಎಂದು ಜಾವಡೇಕರ್ ಹೇಳಿದ್ದಾರೆ.

‘ನವಜೋತ್‌ ಸಿಂಗ್‌ ಸಿಧು ಅವರು ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದ್ದಾರೆ. ಪಕ್ಷವು ಅವರನ್ನು ಪಂಜಾಬ್ ಮುಖ್ಯಮಂತ್ರಿಯನ್ನಾಗಿಸುವ ಕ್ರಮಕ್ಕೆ ಮುಂದಾದರೆ ವಿರೋಧಿಸುವುದಾಗಿ ಅಮರಿಂದರ್ ಸಿಂಗ್ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಈ ಹೇಳಿಕೆ ನೀಡಿದ್ದರು.

‘ಸಿಧು ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಯಾವುದೇ ನಡೆಯನ್ನು ದೇಶದ ಭದ್ರತೆಯ ದೃಷ್ಟಿಯಿಂದ ವಿರೋಧಿಸುವುದಾಗಿ ಅಮರಿಂದರ್ ಸಿಂಗ್ ಹೇಳಿದ್ದರು. ಹಾಗೆಯೇ, ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ (ಸಿಧು) ‘ಅಸಮರ್ಥ’ ಎಂದೂ ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT