ಸೋಮವಾರ, ಜನವರಿ 17, 2022
19 °C

Punjab Elections: ಕಾಂಗ್ರೆಸ್‌ನ ಮೊದಲ ಪಟ್ಟಿ ಪ್ರಕಟ- ಸಿಧು ಕ್ಷೇತ್ರ ಯಾವುದು?

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಅಮೃತಸರ: ಪಂಜಾಬ್‌ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷವು 86 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್‌ ಮಾಡಿರುವ ಪಟ್ಟಿಯ ಪ್ರಕಾರ, ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಚಮ್‌ಕೌರ್‌ ಸಾಹಿಬ್ (ಎಸ್‌ಸಿ ಮೀಸಲು) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್‌ ಪಕ್ಷದ ಪಂಜಾಬ್‌ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಅಮೃತಸರ ಪೂರ್ವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. 

ಪಕ್ಷದ ಪ್ರಮುಖ ನಾಯಕರಾದ ಪ್ರತಾಪ್ ಸಿಂಗ್ ಬಜ್ವಾ ಮತ್ತು ಗಾಯಕ ಸಿಧು ಮೂಸೆವಾಲಾ ಅವರು ಕ್ರಮವಾಗಿ ಖಾದಿಯಾನ್ ಮತ್ತು ಮನ್ಸಾ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಮೊಗಾದಿಂದ ಕಣಕ್ಕಿಳಿಯಲಿದ್ದಾರೆ.

ರಾಜ್ಯದಲ್ಲಿ ಫೆಬ್ರುವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್‌ 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು