ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬಿ ಗಾಯಕ ಸಿಧು ಹತ್ಯೆ: ಹೊಣೆ ಹೊತ್ತ ಕೆನಡಾ ಮೂಲದ ಗ್ಯಾಂಗ್‌ಸ್ಟರ್

Last Updated 30 ಮೇ 2022, 2:41 IST
ಅಕ್ಷರ ಗಾತ್ರ

ಚಂಡೀಗಡ: ಕಾಂಗ್ರೆಸ್ ಮುಖಂಡ ಮತ್ತು ಪಂಜಾಬ್ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯನ್ನು ತಾನು ಮಾಡಿರುವುದಾಗಿ ಕೆನಡಾ ಮೂಲದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಹೇಳಿಕೊಂಡಿದ್ದಾನೆ.

ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸಹಚರ ಗೋಲ್ಡಿ, ಮೂಸೆವಾಲಾ ಮೇಲೆ 30ಕ್ಕೂ ಹೆಚ್ಚು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಮೂಸೆವಾಲಾ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಸಿಎಂ ಭಗವಂತ್ ಮಾನ್, ಈ ಘಟನೆಯಿಂದ ಆಘಾತವಾಗಿದೆ. ಜನರು ದಯವಿಟ್ಟು ಶಾಂತತೆಯಿಂದ ವರ್ತಿಸಬೇಕು ಎಂದು ಕೇಳಿಕೊಂಡಿದ್ದಾರೆ.

ಪಂಜಾಬ್‌ನಲ್ಲಿ ಮೂಸೆವಾಲಾ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆದ 24 ಗಂಟೆಗಳಲ್ಲೇ ಅವರನ್ನು ಗುಂಡಿಕ್ಕಿ ಹತ್ಯೆಮಾಡಲಾಗಿದೆ.

ಪಂಜಾಬಿ ಗಾಯಕರಾಗಿ ಹೆಸರು ಗಳಿಸಿದ್ದ ಮೂಸೆವಾಲ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT