ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ

Last Updated 23 ಮಾರ್ಚ್ 2022, 9:49 IST
ಅಕ್ಷರ ಗಾತ್ರ

ಡೆಹ್ರಾಡೂನ್: ಎರಡನೇ ಅವಧಿಗೆ ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಡೆಹ್ರಾಡೂನ್‌ನ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಗುರ್ಮಿತ್ ಸಿಂಗ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಸೋಮವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಧಾಮಿ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳಲ್ಲಿ ಜಯಿಸಿ ಅಧಿಕಾರ ಉಳಿಸಿಕೊಂಡಿತ್ತು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿರುವುದು ಪುಷ್ಕರ್ ಸಿಂಗ್ ಧಾಮಿ ಅವರ ಹಿನ್ನಡೆಗೆ ಕಾರಣವಗಿತ್ತು. ಆದಾಗ್ಯೂ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT