ಬಲವಂತದ ಮತಾಂತರ: ವಿಸ್ತೃತ ಪೀಠಕ್ಕೆ ವರ್ಗಾಯಿಸಿ - ಸುಪ್ರೀಂ ಕೋರ್ಟ್‌ಗೆ ಅರ್ಜಿ

ನವದೆಹಲಿ: ಬಲವಂತದ ಮತಾಂತರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳನ್ನೊಳಗೊಂಡ ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ಕೋರಿ ವಕೀಲ ಅಶ್ವಿನಿಕುಮಾರ್ ಉಪಾಧ್ಯಾಯ ಎಂಬುವರು ಭಾನುವಾರ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.
ಅಂತರಧರ್ಮೀಯ ವಿವಾಹಕ್ಕಾಗಿ ಮತಾಂತರಗೊಳ್ಳುವುದನ್ನು ನಿಯಂತ್ರಿಸುವ ಉದ್ದೇಶದಿಂದ ಕೆಲ ರಾಜ್ಯಗಳು ಕಾನೂನು ಜಾರಿಗೊಳಿಸಿದ್ದು, ಇವುಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು ಸೋಮವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.