ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳನ್ನು ಜೈಲಿಗೆ ಹಾಕುವುದರಿಂದ ಆಮ್ಲಜನಕ ದೊರೆಯುವುದಿಲ್ಲ: ‘ಸುಪ್ರೀಂ’

Last Updated 5 ಮೇ 2021, 10:15 IST
ಅಕ್ಷರ ಗಾತ್ರ

ನವದೆಹಲಿ: ‘ಅಧಿಕಾರಿಗಳನ್ನು ಜೈಲಿಗೆ ಹಾಕುವುದರಿಂದ ದೆಹಲಿಗೆ ಆಮ್ಲಜನಕ ದೊರೆಯುವುದಿಲ್ಲ. ಜನರ ಜೀವ ಉಳಿಸುವ ಕ್ರಮಗಳನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ’ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.

ನ್ಯಾಯಾಂಗ ನಿಂದನೆ ನೋಟಿಸ್‌ಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.

ಮೇ 3ರವರೆಗೆ ರಾಷ್ಟ ರಾಜಧಾನಿಗೆ ಎಷ್ಟು ಆಮ್ಲಜನಕವನ್ನು ಪೂರೈಸಲಾಗಿದೆ ಎನ್ನುವ ವಿವರ ಸಲ್ಲಿಸುವಂತೆ ನ್ಯಾಯಾಲಯ ಕೇಂದ್ರಕ್ಕೆ ಸೂಚಿಸಿದೆ.

ದೆಹಲಿಗೆ ಮೇ 3ರಿಂದ ಪ್ರತಿ ದಿನ 700 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ಪೂರೈಸಬೇಕು ಎಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಪೀಠವು ಇದೇ ಸಂದರ್ಭದಲ್ಲಿ ಆದೇಶಿಸಿತು.

‘ಜನರಿಂದ ಆಯ್ಕೆಯಾಗಿರುವ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಕೋವಿಡ್‌–19 ನಿಯಂತ್ರಿಸಲು ಅತ್ಯುತ್ತಮ ಕಾರ್ಯ ಕೈಗೊಂಡಿದೆ’ ಎಂದು ಸಾಲಿಸಿಟರಲ್‌ ಜನರಲ್‌ ತುಷಾರ್‌ ಮೆಹ್ತಾ ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT