ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವುದು ಕೆಳಜಾತಿ?: ತಮಿಳುನಾಡಿನ ಪೆರಿಯಾರ್ ವಿವಿ ಪರೀಕ್ಷೆಯಲ್ಲಿ ಪ್ರಶ್ನೆ, ವಿವಾದ

Last Updated 17 ಜುಲೈ 2022, 1:31 IST
ಅಕ್ಷರ ಗಾತ್ರ

ಚೆನ್ನೈ: ಪೆರಿಯಾರ್ ವಿಶ್ವವಿದ್ಯಾನಿಲಯದ ಎರಡನೇ ಸೆಮಿಸ್ಟರ್‌ನ ಎಂಎ ಪರೀಕ್ಷೆಯ ಇತಿಹಾಸ ಪ್ರಶ್ನೆ ಪತ್ರಿಕೆಯಲ್ಲಿ ‘ತಮಿಳುನಾಡಿಗೆ ಸೇರಿದ ಕೆಳಜಾತಿ ಯಾವುದು?’ ಎಂದು ಪ್ರಶ್ನೆಯೊಂದನ್ನು ಕೇಳಲಾಗಿದೆ. ಹೀಗಾಗಿ ವಿವಾದ ಉದ್ಭವವಾಗಿದೆ.

ಈ ವಿಷಯವನ್ನು ಪರಿಶೀಲಿಸಲು ತನಿಖಾ ಸಮಿತಿಯನ್ನು ರಚಿಸುವುದಾಗಿ ವಿವಿ ತಿಳಿಸಿದೆ.

1880 ರಿಂದ 1947 ರವರೆಗಿನ ತಮಿಳುನಾಡಿನ ಸ್ವಾತಂತ್ರ್ಯ ಚಳವಳಿಯ ಕುರಿತು ಇತಿಹಾಸ ಪ್ರಶ್ನೆ ಪತ್ರಿಕೆಯ ಭಾಗ–‘ಎ’ನಲ್ಲಿ ಒಂದು ಅಂಕದ, ಬಹುಆಯ್ಕೆಯ 15 ಪ್ರಶ್ನೆಗಳನ್ನು ಕೇಳಲಾಗಿದೆ. ಈ ಸರಣಿಯ 11ನೇ ಪ್ರಶ್ನೆ ಹೀಗಿದೆ: ‘ತಮಿಳುನಾಡಿಗೆ ಸೇರಿದ ಕೆಳಜಾತಿ ಯಾವುದು?’ ಎಂದು ಕೇಳಲಾಗಿದೆ.

ಈ ವಿಷಯ ತಮಿಳುನಾಡಿನಲ್ಲಿ ಸದ್ಯ ವಿವಾದ ಹುಟ್ಟು ಹಾಕಿದೆ.

ತಪ್ಪಿತಸ್ಥರ ವಿರುದ್ಧ ವಿವಿ ಕ್ರಮ ಕೈಗೊಳ್ಳಲಿದೆ ಎಂದು ಪೆರಿಯಾರ್ ವಿಶ್ವವಿದ್ಯಾಲಯದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಈ ಪ್ರಶ್ನೆ ಕೇಳಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ವಿಶ್ವವಿದ್ಯಾಲಯ ಮತ್ತು ಅದರ ಇತಿಹಾಸ ವಿಭಾಗವನ್ನು ಟೀಕೆಗೆ ಗುರಿಪಡಿಸಲಾಗಿದೆ.

***

ನಾವು ಈ ಬಗ್ಗೆ ವಿಚಾರಣೆ ನಡೆಸಿದ್ದೇವೆ. ಪ್ರಶ್ನೆಯು ಪಠ್ಯಕ್ರಮದ ಭಾಗವಾಗಿದೆ ಎಂದು ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ ಶಿಕ್ಷಕರು ಹೇಳಿದ್ದಾರೆ. ಆದರೆ, ಈ ಪ್ರಶ್ನೆಯನ್ನು ತಪ್ಪಿಸಬಹುದಿತ್ತು.

– ಡಿ.ಗೋಪಿ, ಕುಲಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT