ಗುರುವಾರ , ಆಗಸ್ಟ್ 11, 2022
27 °C

ಹಿಂದೂಮಹಾಸಾಗರದಲ್ಲಿ 120 ಯುದ್ಧನೌಕೆಗಳ ನಿಯೋಜನೆ: ರಕ್ಷಣಾ ಪಡೆಗಳ ಮುಖ್ಯಸ್ಥ ರಾವತ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿವಿಧ ಕಾರ್ಯತಂತ್ರದ ಭಾಗವಾಗಿ ಹಿಂದೂಮಹಾಸಾಗರದಲ್ಲಿ (ಐಒಆರ್‌) 120 ಯುದ್ಧನೌಕೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಶುಕ್ರವಾರ ಹೇಳಿದರು.

ಜಾಗತಿಕ ಭದ್ರತೆ ಕುರಿಂತೆ ಆನ್‌ಲೈನ್‌ ಮೂಲಕ ನಡೆದ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ಯುದ್ಧದ ಕಾರ್ಯತಂತ್ರದ ದೃಷ್ಟಿಯಿಂದ ಅನೇಕ ದೇಶಗಳು ಹಿಂದೂಮಹಾಸಾಗರದಲ್ಲಿ ತಮ್ಮ ನೆಲೆಗಳನ್ನು ಸ್ಥಾಪಿಸಲು ಮುಂದಾಗುತ್ತಿವೆ. ಬರುವ ದಿನಗಳಲ್ಲಿ ಈ ಪ್ರವೃತ್ತಿ ಇನ್ನೂ ಹೆಚ್ಚಲಿದೆ’ ಎಂದರು.

‘ನೆರೆಯ ರಾಷ್ಟ್ರವೊಂದು ಪ್ರಬಲ ಸ್ಪರ್ಧೆಯೊಡ್ಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ ಸಹ ತನ್ನ ಸೇನಾ ಸಾಮರ್ಥ್ಯ ಹೆಚ್ಚಿಸಿಕೊಂಡು ಜಾಗತಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕಿದೆ’ ಎಂದು ಅವರು ಚೀನಾ ಹೆಸರು ಪ್ರಸ್ತಾಪಿಸದೇ ಹೇಳಿದರು.

‘ಭೌಗೋಳಿಕ ಮತ್ತು ರಾಜಕೀಯ ಕಾರ್ಯತಂತ್ರದ ದೃಷ್ಟಿಯಿಂದಲೂ ಹಿಂದೂಮಹಾಸಾಗರಕ್ಕೆ ಮಹತ್ವ ಇದೆ. ಈ ಕಾರಣದಿಂದಾಗಿಯೂ ಇತರ ದೇಶಗಳು ಈ ಸಾಗರ ಪ್ರದೇಶದ ಮೇಲೆ ಕಣ್ಣಿಟ್ಟಿವೆ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು