ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ವಾಯುಪಡೆಗೆ ರಫೇಲ್‌ ಯುದ್ಧವಿಮಾನ ಸೇರ್ಪಡೆ

Last Updated 8 ಸೆಪ್ಟೆಂಬರ್ 2020, 16:22 IST
ಅಕ್ಷರ ಗಾತ್ರ

ನವದೆಹಲಿ: ಇತ್ತೀಚೆಗೆ ಫ್ರಾನ್ಸ್‌ನಿಂದ ಭಾರತದ ಅಂಬಾಲ ವಾಯುನೆಲೆಗೆ ಬಂದಿಳಿದಿರುವ ಐದು ರಫೇಲ್‌ ಯುದ್ಧ ವಿಮಾನಗಳು ಗುರುವಾರ(ಸೆ.10) ಭಾರತೀಯ ವಾಯುಪಡೆಗೆ(ಐಎಎಫ್‌) ಅಧಿಕೃತವಾಗಿ ಸೇರ್ಪಡೆಯಾಗಲಿವೆ.

ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಫ್ರಾನ್ಸ್‌ನ ರಕ್ಷಣಾ ಸಚಿವ ಫ್ಲೋರೆನ್ಸ್‌ ಪಾರ್ಲೆ ಸೇರಿದಂತೆ ಹಿರಿಯ ಸೇನಾ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಕ್ರಮದ ನಂತರ ರಕ್ಷಣಾ ವಲಯದಲ್ಲಿ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ರಾಜನಾಥ್‌ ಸಿಂಗ್‌ ಹಾಗೂ ಪಾರ್ಲೆ ಅವರು ಸಭೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮತ್ತೆ 36 ರಫೇಲ್‌ ಖರೀದಿ?: ಫ್ರಾನ್ಸ್‌ನಿಂದ ಮತ್ತೆ 36 ರಫೇಲ್‌ ಯುದ್ಧ ವಿಮಾನಗಳ ಖರೀದಿ ಸಂಭಾವ್ಯವಿದ್ದು, ಈ ಕುರಿತ ಪ್ರಾಥಮಿಕ ಹಂತದ ಮಾತುಕತೆ ಗುರುವಾರ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಬೆಳಿಗ್ಗೆ ಭಾರತಕ್ಕೆ ಆಗಮಿಸಲಿರುವ ಪಾರ್ಲೆ, ಅದೇ ದಿನ ಮಧ್ಯಾಹ್ನ ಫ್ರಾನ್ಸ್‌ಗೆ ಹಿಂದಿರುಗಲಿದ್ದಾರೆ. ₹59,000 ಕೋಟಿ ವೆಚ್ಚದಲ್ಲಿ ಭಾರತವು ಫ್ರಾನ್ಸ್‌ನಿಂದ 36 ರಫೇಲ್‌ ಯುದ್ಧ ವಿಮಾನಗಳನ್ನು ಖರೀದಿಸುತ್ತಿದ್ದು, ಈ ಪೈಕಿ 10 ಯುದ್ಧ ವಿಮಾನಗಳನ್ನು ಡಾಸೊ‌ ಏವಿಯೇಷನ್‌ ಕಂಪನಿ ಹಸ್ತಾಂತರಿಸಿದೆ. ಈ ಪೈಕಿ ಐದು ಯುದ್ಧ ವಿಮಾನಗಳು ಭಾರತೀಯ ವಾಯುಪಡೆಯ ಪೈಲೆಟ್‌ಗಳ ತರಬೇತಿಗಾಗಿ ಫ್ರಾನ್ಸ್‌ನಲ್ಲೇ ಇದ್ದು, ಉಳಿದ ಐದು ಯುದ್ಧ ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿಳಿದಿದ್ದವು. ನವೆಂಬರ್‌ನಲ್ಲಿ ಮತ್ತೆ 4–5 ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸುವ ಸಾಧ್ಯತೆ ಇದೆ.2021ರೊಳಗೆ 36 ಯುದ್ಧ ವಿಮಾನಗಳು ಭಾರತಕ್ಕೆ ಹಸ್ತಾಂತರವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT