ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಕಾಂಗ್ರೆಸ್‌ ಸೇರುವ ಸಾಧ್ಯತೆ

Last Updated 29 ಜುಲೈ 2021, 15:58 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಆಗುವ ಸಾಧಕ– ಬಾಧಕಗಳ ಕುರಿತು ಪಕ್ಷದ ಹಿರಿಯ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಕಾಂಗ್ರೆಸ್‌ ಹಿರಿಯ ಮುಖಂಡರಾದ ಎ.ಕೆ. ಆಂಟನಿ, ಮಲ್ಲಿಕಾರ್ಜುನ ಖರ್ಗೆ, ಕಮಲ್ ನಾಥ್, ಅಂಬಿಕಾ ಸೋನಿ, ಹರೀಶ್ ರಾವತ್, ಕೆ.ಸಿ. ವೇಣುಗೋಪಾಲ್ ಮತ್ತು ಇತರರು ಈ ಸಂಬಂಧ ಜುಲೈ 22ರಂದು ಗಾಂಧಿ ನಿವಾಸದಲ್ಲಿ ನಡೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಶಾಂತ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಆಗುವ ಸಾಧಕ–ಬಾಧಕಗಳು ಹಾಗೂ ಪ್ರಶಾಂತ್‌ ಅವರಿಗೆ ಯಾವ ಜವಾಬ್ದಾರಿಯನ್ನು ನೀಡಬೇಕು ಎಂಬುದು ಸಭೆಯ ಮುಖ್ಯ ಕಾರ್ಯಸೂಚಿಯಾಗಿತ್ತು ಎಂದು ಮೂಲಗಳು ಹೇಳಿವೆ.

ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಮುಖಂಡರು ಪ್ರಶಾಂತ್‌ ಅವರು ಕಾಂಗ್ರೆಸ್‌ ಸೇರಿದರೆ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಗಳಿಗೂ ಮುನ್ನ ಜುಲೈ 13ರಂದು ಪ್ರಶಾಂತ್‌ ಅವರು ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಆದರೆ, ಈ ಬೆಳವಣಿಗೆ ಕುರಿತು ಕಾಂಗ್ರೆಸ್‌ ಪಕ್ಷವಾಗಲಿ, ಪ್ರಶಾಂತ್‌ ಕಿಶೋರ್‌ ಅವರಾಗಲಿ ಅಧಿಕೃತ ಮಾಹಿತಿ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT