ರೈತ ಪರವಾಗಿರುವವರ ಮೇಲೆ ದಾಳಿ: ರಾಹುಲ್ ಟೀಕೆ

ನವದೆಹಲಿ: ಕೇಂದ್ರ ಸರ್ಕಾರದ ಧೋರಣೆಗಳನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರೈತರ ಪರವಾಗಿರುವವರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆ ಮೂಲಕ ದಾಳಿ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ.
ಬಾಲಿವುಡ್ ನಟಿ ತಾಪ್ಸಿ ಪನ್ನು, ನಿರ್ದೇಶಕ ಮತ್ತು ನಿರ್ಮಾಪಕರಾದ ಅನುರಾಗ್ ಕಶ್ಯಪ್ ಹಾಗೂ ರಿಲಯನ್ಸ್ ಎಂಟರ್‌ಟೈನ್‌ಮೆಂಟ್ ಗ್ರೂಪ್‌ನ ಸಿಇಒ ಶಿಭಾಶಿಶ್ ಸರ್ಕಾರ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಬುಧವಾರ ಶೋಧ ಕಾರ್ಯ ನಡೆಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ಹಿಂದಿಯ ನುಡಿಗಟ್ಟುಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ‘ಆದಾಯ ತೆರಿಗೆ ಇಲಾಖೆ ತನ್ನ ತಾಳಕ್ಕೆ ಕುಣಿಯವಂತೆ ಕೇಂದ್ರ ಸರ್ಕಾರ ಮಾಡಿದೆ’ ಎಂದು ಟೀಕಿಸಿದ್ದಾರೆ.
‘ಕೇಂದ್ರ ಸರ್ಕಾರದ ಮುಂದೆ ಮಾಧ್ಯಮವೂ ತಲೆಬಾಗಿದೆ ಮತ್ತು ರೈತರ ಪರವಾಗಿರುವವರ ಮೇಲೆ ದಾಳಿ ನಡೆಸಲಾಗುತ್ತಿದೆ’ ಎಂದು ಅವರು ಟೀಕಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.