ಶನಿವಾರ, ಅಕ್ಟೋಬರ್ 1, 2022
20 °C

ರಾಷ್ಟ್ರಧ್ವಜ ಖರೀದಿಸುವಂತೆ ಪಡಿತರ ಗ್ರಾಹಕರ ಮೇಲೆ ಒತ್ತಡ: ರಾಹುಲ್ ಗಂಭೀರ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರಧ್ವಜ ಖರೀದಿಸುವಂತೆ ಪಡಿತರ ಗ್ರಾಹಕರ ಮೇಲೆ ಅಂಗಡಿಯವರು ಒತ್ತಡ ಹೇರುತ್ತಿದ್ದಾರೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.  

ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಹಂಚಿಕೊಂಡಿರುವ ಅವರು, ಬಿಜೆಪಿಯು ‘ರಾಷ್ಟ್ರೀಯತೆ’ಯನ್ನು ಮಾರಾಟ ಮಾಡುತ್ತಿದೆ. ಆ ಮೂಲಕ ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಟೀಕಿಸಿದ್ದಾರೆ.

‘ತ್ರಿವರ್ಣ ಧ್ವಜ ನಮ್ಮ ಹೆಮ್ಮೆ ಮತ್ತು ಅದು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದೆ’ ಎಂದು ಹೇಳಿದ್ದಾರೆ.

‘ರಾಷ್ಟ್ರೀಯತೆಯನ್ನು ಎಂದಿಗೂ ಮಾರಾಟ ಮಾಡಲು ಸಾಧ್ಯವಿಲ್ಲ. ಪಡಿತರ ನೀಡುವಾಗ ತ್ರಿವರ್ಣ ಧ್ವಜಕ್ಕಾಗಿ  20 ರೂಪಾಯಿ ನೀಡುವಂತೆ ಬಡವರಿಗೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದು ರಾಹುಲ್‌ ವಾಗ್ದಾಳಿ ನಡೆಸಿದ್ದಾರೆ.

‘ತ್ರಿವರ್ಣ ಧ್ವಜದ ಜೊತೆಗೆ, ಬಿಜೆಪಿ ಸರ್ಕಾರವು ನಮ್ಮ ದೇಶದ ಬಡವರ ಸ್ವಾಭಿಮಾನದ ಮೇಲೂ ದಾಳಿ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧ್ವಜ ಖರೀದಿಸಲು 20 ರೂಪಾಯಿ ನೀಡುವಂತೆ ಗ್ರಾಹಕರಿಕೆ ಬಲವಂತ ಮಾಡುತ್ತಿರುವ ವಿಡಿಯೊವೊಂದನ್ನು ರಾಹುಲ್‌ ಹಂಚಿಕೊಂಡಿದ್ದಾರೆ.

ಇದಕ್ಕೂ ಮುನ್ನ, ಬಿಜೆಪಿ ಸಂಸದ ವರುಣ್ ಗಾಂಧಿ ಸಹ, ‘ರಾಷ್ಟ್ರಧ್ವಜ ಖರೀದಿಸುವಂತೆ ಪಡಿತರ ಗ್ರಾಹಕರ ಮೇಲೆ ಒತ್ತಡ ಹೇರಲಾಗುತ್ತಿದೆ’ ಎಂದು ಆರೋಪಿಸಿದ್ದರು.

'ಹರ್‌ ಘರ್‌ ತಿರಂಗ' ಅಭಿಯಾನದಡಿ ಪ್ರತಿಯೊಬ್ಬರೂ ಆಗಸ್ಟ್‌ 13ರಿಂದ 15ರವರೆಗೆ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವಂತೆ ಕೇಂದ್ರ ಸರ್ಕಾರ ಹೇಳಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು