ಬುಧವಾರ, ಮೇ 25, 2022
29 °C

ಉತ್ತರ ಪ್ರದೇಶ: ಯುವ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ ರಾಹುಲ್ ಗಾಂಧಿ-ಪ್ರಿಯಾಂಕಾ

ಪಿಟಿಐ Updated:

ಅಕ್ಷರ ಗಾತ್ರ : | |

Congress Leaders Rahul Gandhi and Priyanka Gandhi. Credit: PTI Photo

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ. ಯುವ ಮತದಾರರನ್ನು ಸೆಳೆಯುವ ಸಲುವಾಗಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಯುವ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ಪಕ್ಷದ ಕಚೇರಿಯಲ್ಲಿ ಉಭಯ ನಾಯಕರು ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇಬ್ಬರೂ ಜತೆಯಾಗಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಪರೂಪವಾಗಿದ್ದು, ಹೊಸ ಪ್ರಣಾಳಿಕೆ ಕುರಿತು ಹೆಚ್ಚಿನ ನಿರೀಕ್ಷೆ ಮೂಡಿಸಿದೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಈ ಬಾರಿ ಮಹಿಳೆಯರು ಮತ್ತು ಯುವ ಪ್ರಾತಿನಿಧ್ಯಕ್ಕೆ ಹೆಚ್ಚಿನ ಒತ್ತು ನೀಡಲು ಕಾಂಗ್ರೆಸ್ ಮುಂದಾಗಿದೆ.

ಉತ್ತರ ಪ್ರದೇಶದಲ್ಲಿ ಶೇ 40ರಷ್ಟು ಸೀಟುಗಳನ್ನು ಮಹಿಳೆಯರಿಗೆ ನೀಡಲು ಕಾಂಗ್ರೆಸ್ ಮುಂದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು