ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಪುನರ್‌ಪರಿಶೀಲನೆ: ರಾಹುಲ್ ಗಾಂಧಿ

ಕೊಯಂಬತ್ತೂರು: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷವು ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್‌ಟಿ), ಪುನರ್‌ಪರಿಶೀಲಿಸುವುದಕ್ಕೆ ಬದ್ಧವಾಗಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ತಿಳಿಸಿದ್ದಾರೆ.
ಪ್ರಸ್ತುತ ಇರುವ ತೆರಿಗೆ ವ್ಯವಸ್ಥೆಯು ಸಣ್ಣ ಮತ್ತು ಮಧ್ಯಮ ಕೈಗಾರಿಕಗಳನ್ನು(ಎಂಎಸ್‌ಎಂಇ) ದುರ್ಬಲಗೊಳಿಸಿದೆ ಎಂದು ಕೈಗಾರಿಕಾ ಪ್ರತಿನಿಧಿಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಹೇಳಿದರು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಪ್ರಸ್ತುತ ಇರುವ ಜಿಎಸ್‌ಟಿಗೆ ಹೊಸ ರೂಪ ನೀಡಿ, ಒಂದು ತೆರಿಗೆ ಕನಿಷ್ಠ ತೆರಿಗೆಯನ್ನು ಜಾರಿಗೊಳಿಸುವ ಭರವಸೆಯನ್ನೂ ಇದೇ ವೇಳೆ ನೀಡಿದರು.
ತಮಿಳುನಾಡು ವಿಧಾನಸಭೆ ಚುನಾವಣೆಗೆ ಪ್ರಚಾರ ಆರಂಭಿಸಿರುವ ರಾಹುಲ್ ಗಾಂಧಿ, ‘ಚೀನಾ ಮತ್ತು ಬಾಂಗ್ಲಾದೇಶದಂತಹ ರಾಷ್ಟ್ರಗಳ ಜೊತೆ ಸ್ಪರ್ಧಿಸಲು ದೇಶದ ಎಂಎಸ್‌ಎಂಇಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಅಗತ್ಯತೆ ಇದೆ. ಭಾರತದ ಭವಿಷ್ಯವೇ ಈ ಎಂಎಸ್‌ಎಂಇಗಳು’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.