ನವದೆಹಲಿ: ರಫೇಲ್ ಯುದ್ಧವಿಮಾನ ಖರೀದಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದು, ’ವ್ಯಕ್ತಿ ತಾನು ಮಾಡಿದ ಕರ್ಮಕ್ಕೆ ಪ್ರತಿಫಲವನ್ನು ಅನುಭವಿಸಲೇಬೇಕು. ಇದರಿಂದ ಯಾರೂ ಪಾರಾಗಲು ಸಾಧ್ಯ ಇಲ್ಲ’ ಎಂದು ಕುಟುಕಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ರಫೇಲ್ ಯುದ್ಧ ವಿಮಾನ ತಯಾರಕ ಕಂಪನಿಯು ಮಧ್ಯವರ್ತಿಯೊಬ್ಬರಿಗೆ ₹ 9.51 ಕೋಟಿ (ಹತ್ತು ಲಕ್ಷ ಯುರೊ) ನೀಡಿದೆ ಎಂಬುದಾಗಿ ಫ್ರಾನ್ಸ್‌ನ ಮಾಧ್ಯಮವೊಂದು ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ.

‘ರಫೇಲ್ ಯುದ್ಧವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸುತ್ತಲೇ ಇದ್ದಾರೆ. ಈಗ ಫ್ರಾನ್ಸ್‌ನ ಮಾಧ್ಯಮದಲ್ಲಿ ಈ ಬಗ್ಗೆ ವರದಿಯಾಗಿದ್ದು, ಇದು ರಾಹುಲ್ ಗಾಂಧಿ ಅವರ ಆರೋಪಗಳನ್ನು ಸಮರ್ಥಿಸುತ್ತದೆ’ ಎಂದು ಕಾಂಗ್ರೆಸ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.