ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫೇಲ್‌ ಕರ್ಮದಿಂದ ಪಾರಾಗಲು ಯಾರಿಗೂ ಸಾಧ್ಯವಿಲ್ಲ -ರಾಹುಲ್‌ ಗಾಂಧಿ

Last Updated 6 ಏಪ್ರಿಲ್ 2021, 14:51 IST
ಅಕ್ಷರ ಗಾತ್ರ

ನವದೆಹಲಿ: ರಫೇಲ್ ಯುದ್ಧವಿಮಾನಗಳ ಖರೀದಿಗೆ ಸಂಬಂಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದು, ‘ಕ್ರಿಯೆಗೆ ಸಂಬಂಧಿಸಿದ ಕರ್ಮದಿಂದ ಯಾರೊಬ್ಬರೂ ಪಾರಾಗಲು ಸಾಧ್ಯವಿಲ್ಲ’ ಎಂದಿದ್ದಾರೆ.

‘ಮಧ್ಯವರ್ತಿ’ಗೆ 1.1 ಮಿಲಿಯನ್‌ ಯೂರೊ (₹9.51 ಕೋಟಿ) ಪಾವತಿಸಲಾಗಿದೆ ವಿಮಾನಗಳ ತಯಾರಿಕಾ ಸಂಸ್ಥೆಯ ಹೇಳಿಕೆ ಕುರಿತು ಫ್ರಾನ್ಸ್‌ ಮಾಧ್ಯಮಗಳ ವರದಿ ಕುರಿತಂತೆ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ಈ ಮೊದಲು ಆರೋಪವನ್ನು ನಿರಾಕರಿಸಿತ್ತು.

ಯುದ್ಧವಿಮಾನಗಳ ಖರೀದಿ ವಹಿವಾಟಿನಲ್ಲಿ ಕಮಿಷನ್‌ ಪಾವತಿಯಾಗಿದೆ ಎಂದು ರಾಹುಲ್‌ ಗಾಂಧಿ ಈ ಹಿಂದೆಯೂ ಪ್ರಬಲವಾಗಿ ಆರೋಪಿಸಿದ್ದು, ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿತ್ತು.

‘ಕರ್ಮ ಎಂಬುದು ಒಬ್ಬರ ಕ್ರಿಯೆಗೆ ಸಂಬಂಧಿಸಿದ ದಾಖಲೆ. ಅದರಿಂದ ಯಾರೂ ತಪ್ಪಿಸಿಕೊಳ್ಳಲಾಗದು’ ಎಂದು ಅವರು ಟ್ವೀಟ್ ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಈ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT