ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದ್ದು, ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಶುಕ್ರವಾರ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು,’ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ, ಆದರೆ, ಮೋದಿ ಸರ್ಕಾರ ನಾಪತ್ತೆಯಾಗಿದೆ’ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕುರಿತು ಜುಲೈ 17ರಂದು ಟ್ವೀಟ್ ಮಾಡಿ ಕೇಂದ್ರವನ್ನು ಎಚ್ಚರಿಸಿದ್ದ ರಾಹುಲ್ ಗಾಂಧಿ, ’ಸೋಂಕಿನ ಪ್ರಮಾಣ ಇದೇ ವೇಗದಲ್ಲಿ ಮುಂದುವರಿಯುತ್ತಿದ್ದರೆ ಆಗಸ್ಟ್ 10ರ ವೇಳೆಗೆ ಸೋಂಕಿತರ ಸಂಖ್ಯೆ 20 ಲಕ್ಷ ದಾಟುತ್ತದೆ’ ಎಂದು ಹೇಳಿದ್ದರು. ಆ ಟ್ವೀಟ್ ಮೆಸೇಜ್ ಅನ್ನೂ, ಇವತ್ತಿನ ಟ್ವೀಟ್‌ನೊಂದಿಗೆ ಟ್ಯಾಗ್ ಮಾಡಿದ್ದಾರೆ.

ಸರ್ಕಾರದ ಮಾಹಿತಿ ಪ್ರಕಾರ ಗುರುವಾರ ಸಂಜೆ ವೇಳೆಗೆ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ. 13.70 ಲಕ್ಷ ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಇಲ್ಲಿವರೆಗೂ ದೇಶದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 40 ಸಾವಿರ.

ಕೊರೊನಾ ಸೊಂಕಿತರ ಪ್ರಮಾಣದಲ್ಲಿ ವಿಶ್ವದಲ್ಲಿ ಭಾರತದ ಮೂರನೇ ಸ್ಥಾನದಲ್ಲಿದ್ದರೆ, ಮೊದಲ ಸ್ಥಾನದಲ್ಲಿ ಅಮೆರಿಕ ಮತ್ತು ಎರಡನೇ ಸ್ಥಾನದಲ್ಲಿ ಬ್ರೆಜಿಲ್ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.