ಸೋಮವಾರ, ನವೆಂಬರ್ 30, 2020
19 °C

ವಯನಾಡ್: ಕೋವಿಡ್ ನಿಯಂತ್ರಣ ಕುರಿತ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿ

ಎಎನ್‌ಐ Updated:

ಅಕ್ಷರ ಗಾತ್ರ : | |

Rahul gandhi in Wayand

ವಯನಾಡ್: ಕೋವಿಡ್–19 ಸೋಂಕು ಹರಡುವಿಕೆ ನಿಯಂತ್ರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಂಸದ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ತಿಳಿಸಿದೆ.

ವಯನಾಡ್‌ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಹುಲ್ ಅವರು, ಮಲಪ್ಪುರಂ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಕೋವಿಡ್–9 ಪರಾಮರ್ಶೆ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಸೋಮವಾರ ಕೇರಳಕ್ಕೆ ತೆರಳಿರುವ ಅವರು ಬುಧವಾರದ ವರೆಗೆ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಇರಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಾಮರ್ಶೆ ಈ ಭೇಟಿಯ ಪ್ರಮುಖ ಉದ್ದೇಶ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಮಧ್ಯೆ, ರಾಜಕೀಯ ಕಾರಣಕ್ಕಾಗಿ ತಮ್ಮನ್ನು ಸಭೆಗೆ ಹಾಜರಾಗದಂತೆ ಸೂಚಿಸಲಾಗಿದೆ ಎಂದು ವಯನಾಡ್ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆರೋಪಿಸಿದ್ದಾರೆ. ಸಂಸದರು, ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಭಾಗವಹಿಸುವಂತೆ ತಮ್ಮನ್ನು ಆಹ್ವಾನಿಸಲಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ಸಭೆಗೆ ಹಾಜರಾಗುವ ಅಗತ್ಯವಿಲ್ಲ ಎಂಬ ಸಂದೇಶ ಬಂದಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು