ಮಂಗಳವಾರ, ಆಗಸ್ಟ್ 3, 2021
21 °C

ಕೋವಿಡ್‌ 2ನೇ ಅಲೆಗೆ ಮೋದಿ ಗಿಮಿಕ್‌ ಕಾರಣ: ರಾಹುಲ್‌

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌ ಎರಡನೇ ಅಲೆ ವಿಚಾರವಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾಧ್ಯಮಗಳನ್ನು ಉದ್ದೇಶಿ ಶುಕ್ರವಾರ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

'ದೇಶದಲ್ಲಿ ಕಾಣಿಸಿಕೊಂಡಿರುವ ಕೋವಿಡ್‌ ಎರಡನೇ ಅಲೆಗೆ ಪ್ರಧಾನಮಂತ್ರಿಯ ಗಿಮಿಕ್‌ಗಳೇ ಕಾರಣ. ಅವರಿಗೆ ಕೋವಿಡ್‌ ಅನ್ನು ಅರ್ಥ ಮಾಡಿಕೊಳ್ಳಲು ಆಗಿಲ್ಲ. ಭಾರತದಲ್ಲಿನ ಸಾವಿನ ಪ್ರಮಾಣ ಸುಳ್ಳು,' ಎಂದು ರಾಹುಲ್‌ ಆರೋಪಿಸಿದರು.

'ಭಾರತದಲ್ಲಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ತಳಿ ಮತ್ತು ಅದರ ವಿರುದ್ಧದ ಹೋರಾಟದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತೇ ಇಲ್ಲ,' ಎಂದೂ ಗೇಲಿ ಮಾಡಿದರು.

ಇದೇ ವೇಳೆ ಪ್ರಧಾನಿಯವರನ್ನು ಈವೆಂಟ್‌ ಮ್ಯಾನೇಜರ್‌ ಎಂದೂ ರಾಹುಲ್‌ ವ್ಯಂಗ್ಯವಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು